ರಾಜ್ಯಪಾಲರ ನಡೆ ಖಂಡಿಸಿ ರಾಜ್ಯದಾದ್ಯಂತ ಸೋಮವಾರ ‘ಕೈ’ ಪ್ರತಿಭಟನೆ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಸಿಡಿದೆದ್ದಿದೆ. ಇದೀಗ ಗವರ್ನರ್‌ ಕ್ರಮವನ್ನು ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೈ ಪಡೆ ಮುಂದಾಗಿದೆ.

Ad Widget ... ..

ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾ ಪತ್ರ ನೀಡಲು ತೀರ್ಮಾನಿಸಿದೆ. ರಾಷ್ಟ್ರಪತಿಗಳಿಗೆ ಡಿಸಿಗಳ ಮೂಲಕ ಪ್ರತಿಭಟನಾ ಪತ್ರ ನೀಡಲಾಗುತ್ತದೆ. ಈಗಾಗಲೇ ಎಲ್ಲಾ ಶಾಸಕರಿಗೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಕನಿಷ್ಠ ಅರ್ಧ ಕಿಲೋಮೀಟರ್ ನಡೆದು ಹೋಗಿ ಮನವಿ ಸಲ್ಲಿಕೆ ಮಾಡಲಾಗುತ್ತದೆ.

Ad Widget

ರಾಜ್ಯಪಾಲರು ಪ್ರಾಸಿಕ್ಯೂಶನ್‌ ಅನುಮತಿ ನೀಡಿದ ಕೂಡಲೇ ರಾಜ್ಯದ ನಾನಾ ಕಡೆ ಪ್ರತಿಭಟನೆಗಳು ಆರಂಭವಾಗಿವೆ. ರಾಜ್ಯಪಾಲರ ನಡೆ ಸಂವಿಧಾನವಿರೋಧಿ, ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಕೆಲವೆಡೆ ರಾಜ್ಯಪಾಲರಿಗೆ ʼಗೋ ಬ್ಯಾಕ್‌ʼ ಚಳವಳಿ ಕೂಡ ನಡೆದಿದೆ.

Leave a Comment

Your email address will not be published. Required fields are marked *