Ad Widget .

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಪ್ರಾರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಈ ವಾರದ ದ್ವಾದಶ ರಾಶಿಗಳ ಗೋಚಾರಫಲ ಇಲ್ಲಿದೆ…

Ad Widget . Ad Widget .

ಮೇಷ ರಾಶಿ:
ನಿಮಗೆ ಈ ಅವಧಿ ಉತ್ತಮವಾಗಿದೆ, ಉದ್ಯೋಗದ ದೃಷ್ಟಿಯಿಂದ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸದಲ್ಲಿ ಉತ್ತಮ ಪ್ರಗತಿ ಕಂಡು ಬರಲಿದೆ. ವೈವಾಹಿಕ ಜೀವನ, ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ. ಪ್ರೇಮಿಗಲಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಿವಿ ನೋವಿನ ಸಮಸ್ಯೆವಿರಬಹುದು.

Ad Widget . Ad Widget .

ವೃಷಭ ರಾಶಿ:
ಕೆಲಸದಲ್ಲಿ ಒತ್ತಡ ತುಂಬಾವಿರುವುದರಿಂದ ಕುಟುಂಬದ ಕಡೆಗೆ ಗಮನಹರಿಸಲು ಸಾಧ್ಯವಾಗಲ್ಲ. ಆದರೆ ಇದರಿಂದ ನಿಮ್ಮ ಸಂಗಾತಿ ಮನಸ್ಸಿಗೆ ನೋವಾಗುವುದು, ಹಾಗಾಗಿ ಕೆಲಸದ ಜೊತೆಗೆ ಕುಟುಂಬದ ಕಡೆಗೂ ಗಮನಹರಿಸಬೇಕು. ಆರ್ಥಿಕವಾಗಿ ನೋಡುವುದಾದರೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ. ಇನ್ನು ಈ ಸಮಯದಲ್ಲಿ ನೀವು ಆರೋಗ್ಯದ ಕಡೆಗೂ ಗಮನಹರಿಸಬೇಕು.

ಮಿಥುನ ರಾಶಿ:
ಈ ವಾರ ನಿಮಗೆ ಅನುಕೂಲಕರವಾಗಿದೆ, ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ನಿಮಗೆ ತುಂಬಾ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಸಂಗಾತಿಯೊಂದಿಗೆ ಬಾಂಧವ್ಯ ಉತ್ತಮವಾಗಿರಲಿದೆ. ಪ್ರೇಮಿಗಳ ನಡುವಿನ ಬಾಂಧವ್ಯ ಮತ್ತಷ್ಟು ಹೆಚ್ಚಾಗಲಿದೆ.

ಕರ್ಕ ರಾಶಿ:
ಈ ವಾರ ನಿಮಗೆ ಉತ್ತಮವಾಗಿದೆ, ನ್ಯಾಯಾಲಯದಲ್ಲಿ ಏನಾದರು ಪ್ರಕರಣವಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರುವುದರಿಂದ ಈ ಅವಧಿ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ಸಮಯ ಉತ್ತಮವಾಗಿದೆ, ವೃತ್ತಿ ಬದುಕಿನಲ್ಲಿ ಕೆಲ ಅಡೆತಡೆಗಳಿರಬಹುದು, ಆದರೆ ನೀವು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು. ಪ್ರೇಮಿಗಳು ಮದುವೆಯ ಬಗ್ಗೆ ಮನೆಯವರ ಜೊತೆ ಹೇಳಿದರೆ ವಿರೋಧ ಬರಬಹುದು, ಆದರೆ ನೀವು ತಾಳ್ಮೆಯಿಂದ ಬಗೆಹರಿಸಲು ಸಾಧ್ಯವಾಗುವುದು. ಆರೋಗ್ಯದ ಕಡೆಗೆ ಗಮನಹರಿಸಿ.

ಸಿಂಹ ರಾಶಿ:
ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಉದ್ಯೋಗಸ್ಥರಿಗೆ ಉನ್ನತ ಅಧಿಕಾರಿಗಳಿಂದ ಸಂಪೂರ್ಣ ಬೆಂಬಲ ದೊರೆಯಲಿದೆ, ನಿಮ್ಮ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಹೊಸ ವಾಹನ, ಮನೆ, ಭೂಮಿ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಈ ಸಮಯವು ಅನುಕೂಲಕರವಾಗಿರುತ್ತದೆ. ವೈವಾಹಿಕ, ಕುಟುಂಬ ಜೀವನ ಚೆನ್ನಾಗಿರಲಿದದೆ, ಆರೋಗ್ಯವೂ ಉತ್ತಮವಾಗಿರಲಿದೆ.

ಕನ್ಯಾ ರಾಶಿ:
ಈ ವಾರ ನಿಮಗೆ ಶುಭವಾಗಿದೆ. ಅದು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆಯಿದೆ. ಉದ್ಯೋಗಿಗಳ ಆದಾಯದಲ್ಲಿ ಉತ್ತಮ ಪ್ರಗತಿ ಕಂಡು ಬರಲಿದೆ. ವಿವಾಹಿತರಿಗೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ತುಲಾ ರಾಶಿ:
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ. ನಿಮ್ಮ ಕಾರ್ಯಕ್ಷಮತೆಯಲ್ಲಿ ನೀವು ದೊಡ್ಡ ಸುಧಾರಣೆಯನ್ನು ಸಹ ನೋಡುತ್ತೀರಿ. ಆದರೆ ವ್ಯಾಪಾರಿಗಳು ಈ ವಾರ ಹಣದ ವ್ಯವಹಾರದ ಬಗ್ಗೆ ಜಾಗ್ರತೆವಹಿಸಿ, ದೊಡ್ಡ ಹೂಡಿಕೆ ಮಾಡಬೇಡಿ. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆದಾಯವು ಉತ್ತಮವಾಗಿರುತ್ತದೆ, ಆದರೆ ನಿಮ್ಮ ಖರ್ಚು ಕೂಡ ಹೆಚ್ಚಾಗುವುದು. ಆರೋಗ್ಯದ ಕಡೆ ಗಮನಹರಿಸಿ.

ವೃಶ್ಚಿಕ ರಾಶಿ:
ಕೆಲಸದ ಕಡೆ ಗಮನಹರಿಸಬೇಕು. ಕೆಲಸದ ಹೊರೆ ಕೂಡ ಹೆಚ್ಚಿರಲಿದೆ. ಆರ್ಥಿಕವಾಗಿ ತೊಂದರೆಯಿಲ್ಲ, ಆದರೆ ಖರ್ಚು ನಿಯಂತ್ರಿಸಬೇಕು, ಉಳಿತಾಯದ ಕಡೆಗೆ ಗಮನಹರಿಸಬೇಕು. ವೈವಾಹಿಕ ಜೀವನದಲ್ಲಿ ಪ್ರೀತಿ, ನೆಮ್ಮದಿ ಇರಲಿದೆ.

ಧನು ರಾಶಿ:
ಈ ವಾರ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಇನ್ನು ಈ ಅವಧಿಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಪ್ರಯೋಜನ ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ವೈವಾಹಿಕ ಜೀವನದಲ್ಲಿ ಈ ವಾರ ವಿಶೇಷವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ಮಕರ ರಾಶಿ:
ವ್ಯಾಪಾರಿಗಳಿಗೆ ಈ ಅವಧಿ ತುಂಬಾ ಚೆನ್ನಾಗಿರದೆ, ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ಉದ್ಯೋಗಿಗಳಿಗೂ ಈ ಅವಧಿ ತುಂಬಾ ಚೆನ್ನಾಗಿರಲಿದೆ.
ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಕಡೆಗೆ ತುಂಬಾ ಗಮನಹರಿಸಬೇಕು. ವೈವಾಹಿಕ ಬದುಕಿನಲ್ಲಿ ನೀವು ಸಮಯ ಕೊಡುತ್ತಿಲ್ಲ ಎಂದು ಸಂಗಾತಿ ಕೋಪಗೊಳ್ಳಬಹುದು. ಆರೋಗ್ಯದ ಕಡೆಗೆ ಗಮನಹರಿಸಬೇಕು.

ಕುಂಭ ರಾಶಿ:
ಈ ವಾರ ನಿಮಗೆ ಉತ್ತಮವಾಗಿದೆ, ಉದ್ಯೋಗಿಗಳು, ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುತ್ತೀರಿ. ಆರ್ಥಿಕವಾಗಿಯು ಈ ಅವಧಿ ಉತ್ತಮವಾಗಿದೆ, ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ. ಕುಟುಂಬದಲ್ಲಿ ನೆಮ್ಮದಿ, ಪ್ರೀತಿ ಇರಲಿದೆ. ವೈವಾಹಿಕ ಬದುಕಿನಲ್ಲಿ ಸಾಮರಸ್ಯ ಇರಲಿದೆ. ಈ ಅವಧಿ ಆರ್ಥಿಕವಾಗಿ ಉತ್ತಮವಾಗಿರಲಿದೆ.

ಮೀನ ರಾಶಿ:
ಈ ಅವಧಿ ಉತ್ತಮವಾಗಿರಲಿದೆ. ನಿಮ್ಮ ಸ್ಥಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ಯಶಸ್ಸಿನ ಬಲವಾದ ಸಾಧ್ಯತೆಯಿದೆ. ನಿರ್ಧಾರ ನಿಮ್ಮ ಪರವಾಗಿ ಬರಬಹುದು. ವೃತ್ತಿ ಜೀವನದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರಲಿದೆ.

Leave a Comment

Your email address will not be published. Required fields are marked *