Ad Widget .

ಮುಡಾ ಭೂ ಹಗರಣ| ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ತಕ್ಷಣ ಯಾವುದೇ ಕ್ರಮಕೈಗೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಇಂದು ಆದೇಶಿಸಿದೆ.

Ad Widget . Ad Widget .

ಮುಂದಿನ ವಿಚಾರಣೆ ನಡೆಯುವ ಆಗಸ್ಟ್‌ 29ರ ತನಕ ಈ ಮಧ್ಯಂತರ ತೀರ್ಪು ಜಾರಿಯಲ್ಲಿರಲಿದೆ.

Ad Widget . Ad Widget .

ರಾಜ್ಯಪಾಲರ ಕ್ರಮ ಕಾನೂನುಬಾಹಿರ ಹಾಗೂ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದು ತಮ್ಮ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ. ಅಲ್ಲದೇ ಆಡಳಿತವನ್ನೂ ಬಾಧಿಸಿ ರಾಜಕೀಯ ಅಸ್ಥಿರತೆಗೆ ಕಾರಣವಾಗುವ ಸಾಧ್ಯತೆಯೂ ಇದೆ, ಎಂದು ಮುಖ್ಯಮಂತ್ರಿ ಮಧ್ಯಂತರ ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು.

Leave a Comment

Your email address will not be published. Required fields are marked *