Ad Widget .

ಉಪ್ಪಿನಂಗಡಿ: ಜಾರ್ಖಂಡ್ ಮೂಲದ ಬಾಲಕಿ ನೇಣು‌ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕರಾಯ ಗ್ರಾಮದ ಕೊಂಬೆಟ್ಟಿಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಕುಟುಂಬವೊಂದರ 14 ರ ಹರೆಯದ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆ.18ರ ರಾತ್ರಿ ಸಂಭವಿಸಿದೆ.

Ad Widget . Ad Widget .

ಮೂಲತಃ ಜಾಖಂಡ್ ರಾಜ್ಯದ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್ಪಾ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ತನ್ನ ಪತ್ನಿ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಒರ್ವರ ತೋಟದ ಕೆಲಸಕ್ಕೆ ಆಗಮಿಸಿದ್ದರು.

Ad Widget . Ad Widget .

ಬಾಲಕಿ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುತ್ತಾಳೆ ಎಂದು ಆಕೆಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *