Ad Widget .

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಲ್ಲಿ ವಿದ್ಯಾರ್ಥಿಯ ಕಿಡ್ನಾಪ್

ಸಮಗ್ರ ನ್ಯೂಸ್: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿಕೊಂಡು ದುಷ್ಕರ್ಮಿಗಳು ವಿದ್ಯಾರ್ಥಿಯೊಬ್ಬನನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ.

Ad Widget . Ad Widget .

ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

Ad Widget . Ad Widget .

ಅಪಹರಣವಾದ ವಿದ್ಯಾರ್ಥಿ ಜೀವನ್ ಜೈನ್ ಅಪಹರಣ ಮಾಡಿದ ನಾಲ್ವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್, ಕಳೆದ ವರ್ಷ ಆಯುಷ್ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ತಡವಾಗಿ ಹಣಕೊಟ್ಟಿದ್ದಕ್ಕೆ ಅಪಹರಿಸಿ ಬೆದರಿಕೆ ಹಾಕಲಾಗಿದೆ ಎಂದು ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾನೆ.

Leave a Comment

Your email address will not be published. Required fields are marked *