Ad Widget .

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್

ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ತನಗೆ ಹಿಂದೂ ಯುವಕ ಚೂರಿ ಇರಿದಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ‌ನಡೆದಿದ್ದು, ಪ್ರಕರಣ ಬೇರೆಯದೇ ತಿರುವು ಪಡೆದುಕೊಂಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪುತ್ತೂರು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದಾಗಿ ಆರೋಪ ಮಾಡಿದ್ದು ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.

Ad Widget . Ad Widget . Ad Widget .

ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ. ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎರಡು ಸಮುದಾಯದ ಯುವಕರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.

ಮೂಲಗಳ ಪ್ರಕಾರ, ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಆಂಚೆ ಕಚೇರಿಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಘಟನೆ ನಡೆದಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿ ಹಾಗು ಹಿಂದೂ ಧರ್ಮಕ್ಕೆ ಸೇರಿದ ವಿದ್ಯಾರ್ಥಿಯ ಮಧ್ಯೆ ಯಾವುದೋ ವಿಷಯಕ್ಕೆ ಸಣ್ಣ ಜಗಳವಾಗಿದೆ. ಈ ವೇಳೆ ವಿದ್ಯಾರ್ಥಿಯೂ ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದು ಹೇಳಲಾಗುತ್ತಿದೆ.

ಮುಂದುವರಿದ ಭಾಗವಾಗಿ ವಿದ್ಯಾರ್ಥಿನಿ ಸರಕಾರಿ ಆಸ್ಪತ್ರೆಯಲ್ಲಿ ಆಡ್ಮಿಟ್ ಆಗಿದ್ದು, ಆಕೆಯ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ. ವಿದ್ಯಾರ್ಥಿನಿ ತನಗೆ ಆದೇ ವಿದ್ಯಾರ್ಥಿ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿರುವುದಾಗಿ ತಿಳಿದು ಬಂದಿದೆ. ಸದ್ಯ ಪೊಲೀಸರು ಘಟನೆ ನಡೆದ ಸ್ಥಳದ ಸಿಸಿಟಿವಿ ವಿಡಿಯೋ ಪರಿಶೀಲಿಸುತ್ತಿದ್ದು. ಆಕೆಯ ಜತೆಗಿದ್ದ ಬೇರೆ ವಿದ್ಯಾರ್ಥಿಗಳ ಬಳಿಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪ್ರಕರಣದ ವಾಸ್ತವಾಂಶ ಇನ್ನಷ್ಟೇ ಬೆಳಕಿಗೆ ಬರಬೇಕಿದ್ದು, ಸದ್ಯ ಪುತ್ತೂರಿನಲ್ಲಿ ನಡೆದ ಹೈಡ್ರಾಮದ ಕುರಿತು ಚರ್ಚೆಗಳು ಆರಂಭವಾಗಿದೆ.

Leave a Comment

Your email address will not be published. Required fields are marked *