Ad Widget .

ಹೀಲಿಯಂ ಗ್ಯಾಸ್ ಸೇವಿಸಿ ಸಕಲೇಶಪುರ ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ 22 ವರ್ಷದ ಟೆಕ್ಕಿ ಹೀಲಿಯಂ ಗ್ಯಾಸ್‌ (Helium Gas) ಬಳಸಿ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಪ್ರತಿಷ್ಟಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿರುವ ಈತ, ಬಲೂನ್‌ಗೆ ತುಂಬಲು ಬಳಸುವ ಹೀಲಿಯಂ ಗ್ಯಾಸ್ ಮೂಲಕ ಜೀವ ತೆಗೆದುಕೊಂಡಿದ್ದಾನೆ.

Ad Widget . Ad Widget .

ಸಕಲೇಶಪುರ ಮೂಲದ ಯಾಜ್ಙಿಕ್ (22) ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂನಲ್ಲಿದ್ದ ಟೆಕ್ಕಿ, ಎಂಟೆಕ್ ಎಕ್ಸಾಂ ಬರೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಹೋಟೆಲ್‌ನಲ್ಲಿ ಆಗಸ್ಟ್ 16ರಂದು ರೂಂ ಬುಕ್ ಮಾಡಿದ್ದ. ನಿನ್ನೆ (ಆ. 19) ದೊಡ್ಡ ಬ್ಯಾಗ್ ತೆಗೆದುಕೊಂಡು ಪೀಣ್ಯ ಕಡೆ ತೆರಳಿದ್ದಾನೆ.

Ad Widget . Ad Widget .

ಪೀಣ್ಯದಲ್ಲಿ ಹೀಲಿಯಂ ಗ್ಯಾಸ್ ಖರೀದಿ ಮಾಡಿ ಲಾಡ್ಜ್‌ಗೆ ತಂದು, ರಾತ್ರಿ ಲಾಡ್ಜ್‌ನ ಕೋಣೆಯಲ್ಲಿ ಪ್ಲಾಸ್ಟಿಕ್ ಕವರ್‌ಗೆ ಹೀಲಿಯಂ ಗ್ಯಾಸ್ ತುಂಬಿಸಿದ್ದಾನೆ. ಕವರ್ ಮೂಲಕ ಹೀಲಿಯಂ ಗ್ಯಾಸ್ ಇನ್‌ಹೇಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.

Leave a Comment

Your email address will not be published. Required fields are marked *