ಕಾರ್ಕಳ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

ಸಮಗ್ರ ನ್ಯೂಸ್: ಬಸ್ಸಿನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರ (ಆ.21) ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ.

Ad Widget ... ..

ಮೃತ ವಿದ್ಯಾರ್ಥಿ ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದಾನೆ. ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೇ ಗಾಜ್ರಿಯಾ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜನಿತ್ ಕೊನೆಯುಸಿರೆಳೆದಿದ್ದಾರೆ.

Ad Widget

Leave a Comment

Your email address will not be published. Required fields are marked *