Ad Widget .

ಸಿಎಂ ನೇತೃತ್ವದಲ್ಲಿ ಇಂದು ಸಂಪುಟ ಸಭೆ.. ಬೆಂಗಳೂರಿನಲ್ಲಿ ಸುರಂಗ ಮಾರ್ಗಕ್ಕೆ ಅಸ್ತು..!

ಸಮಗ್ರ ನ್ಯೂಸ್: ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಯಿತು. ಇದರಲ್ಲಿ ಬೆಂಗಳೂರಿನ ಸುರಂಗ ಮಾರ್ಗ, ಟಿಡಿಆರ್ ಸೇರಿದಂತೆ ಪ್ರಮುಖ ಕಾಮಗಾರಿಗಳ ಸೇರಿದಂತೆ 40ಕ್ಕೂ ಹೆಚ್ಚು ಅಭಿವೃದ್ಧಿ ವಿಷಯಗಳ ಮೇಲೆ ಚರ್ಚೆ ಮಾಡಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಬೆಂಗಳೂರಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Ad Widget . Ad Widget .

250 ಅಡಿ ಎತ್ತರದ 500 ಕೋಟಿ ರೂ. ವೆಚ್ಚದಲ್ಲಿ ಸ್ಕೈಡೆಕ್ ನಿರ್ಮಾಣಕ್ಕೆ ಅನುಮೋದಿಸಲಾಗಿದ್ದು, ಇನ್ನೂ ಕೂಡ ಸ್ಥಳ ನಿಗದಿಯಾಗಿಲ್ಲ ಎಂದಿದ್ದಾರೆ. ಬೆಂಗಳೂರು ನಗರದ ಹೆಬ್ಬಾಳ ಮೇಲ್ಸುತೇವೆಯಿಂದ ಸಿಲ್ಕ್ ಬೋರ್ಡ್ವರೆಗೆ ಸುರಂಗ ಮಾರ್ಗಕ್ಕೆ 12,600 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ತಿಳಿಸಿದರು. ಬಾಲ ಗರ್ಭಿಣಿಯರ ಸಂಖ್ಯೆ ತಡೆಯಲು ವಿವಿಧ ಇಲಾಖೆಗಳ ಜವಾಬ್ದಾರಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *