ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ ಮಾಡಬೇಕಿದೆ. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡಲು ಹಣವಿಲ್ಲ. ಯಾರು ಏನು ಹೇಳಿದರೂ ನಾನು ನೀರಿನ ಬೆಲೆ ಏರಿಕೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
8-9 ವರ್ಷದಿಂದ ನೀರಿನ ದರ ಏರಿಕೆ ಮಾಡಿಲ್ಲ. ನೀರಿನ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗಬೇಕು. ಜಲಮಂಡಳಿ ನಷ್ಟದಲ್ಲಿ ನಡೆಯುತ್ತಿದೆ. ಸಂಬಳ ಕೊಡೋಕೆ ಆಗುತ್ತಿಲ್ಲ. ಮಂಡಳಿಯ ವಿದ್ಯುತ್ ದರವೂ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್‌ಗೆ ನೋಡಿ ದರ ನಿಗದಿ ಮಾಡಬೇಕು. ಎಷ್ಟು ದರ ಏರಿಕೆ ಮಾಡಬೇಕು ಅಂತ ನಿರ್ಧಾರ ಮಾಡಿಲ್ಲ. ಕಮಿಟಿ ಸಭೆ ಮತ್ತು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡುತ್ತೇವೆ. ಆದರೆ ಇಂದಿನ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಈ ವಿಷಯ ಇಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ನಾಗರಿಕರಿಗೆ ಎಷ್ಟು ಮಾಡಿದರೂ ಅಷ್ಟೆ, ಅವರಿಗೆ ಉಪಕಾರ ಸ್ಮರಣೆ ಇಲ್ಲ. ಬೈತಾರೆ, ಕಾಮೆಂಟ್ ಮಾಡ್ತಾರೆ, ವಾಟ್ಸ್ಯಾಪ್‌ನಲ್ಲಿ ಹಾಕ್ತಾರೆ. ನಂತರ ಮರೆತು ಬಿಡ್ತಾರೆ. ನೀರು ಕೊಟ್ಟರೆ ತಗೋತಾರೆ ಅಷ್ಟೆ. ಕೆಲವರು ದುಡ್ಡು ಕಟ್ಟುವವರು ಕಟ್ಟುತ್ತಾರೆ, ಕೆಲವರು ಕಟ್ಟಲ್ಲ. ಮೀಡಿಯಾದವರಾದರೂ ಬೈಯಲಿ, ಜನರಾದರೂ ಬಯ್ಯಲಿ, ವಿರೋಧ ಪಕ್ಷದವರಾದರೂ ವಿರೋಧ ಮಾಡಲಿ. ಕಂಪನಿ ಉಳಿಯಬೇಕಾಗಿದೆ ಅದಕ್ಕಾಗಿ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.