Ad Widget .

ವಾಲ್ಮೀಕಿ ನಿಗಮದ ಅಕ್ರಮ| ಮಾಜಿ ಸಚಿವ ನಾಗೇಂದ್ರಗೆ ಎಸ್ಐಟಿ ಕ್ಲೀನ್ ಚಿಟ್!!

ಸಮಗ್ರ ನ್ಯೂಸ್: ಮಹರ್ಷಿ ವಾಲ್ಮೀಕಿ ನಿಗಮದ ಲೆಕ್ಕಪರಿಶೋಧಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳಿಂದ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ಅವರ ಒತ್ತಡದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿ ಎಸ್‌ಐಟಿ ಅಧಿಕಾರಿಗಳ ತಂಡ 300 ಪುಟಗಳ ಚಾರ್ಜ್‌ಶೀಟ್ ಅನ್ನು ಶಿವಮೊಗ್ಗ ಕೋರ್ಟ್‌ಗೆ ಸಲ್ಲಿಸಿದ್ದಾರೆ.

Ad Widget . Ad Widget .

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಚಂದ್ರಶೇಖರ್ ಅವರ ಡೆತ್ ನೋಟ್ ಹಾಗೂ ನಾಗೇಂದ್ರ ಪತ್ನಿ ನೀಡಿದ್ದ ದೂರು ಆಧರಿಸಿ ತನಿಖೆ ನಡೆಸಿರುವ ಎಸ್‌ಐಟಿ ತಂಡ ಇಂದು 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇನ್ನೂ ಈ ಹಗರಣದಲ್ಲಿ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಅವರು ಶಿವಮೊಗ್ಗದ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್.ಪಿ ಬರೆದಿರುವ ಡೆತ್‌ ನೋಟ್‌ನಲ್ಲಿ ಹೆಸರು ಹೇಳದೆ ಸಚಿವ ಬಿ.ನಾಗೇಂದ್ರ ಅವರ ಬಗ್ಗೆ ಉಲ್ಲೇಖ ಮಾಡಿದ್ದರು. ಈ ಹಿನ್ನೆಲೆ ಮಾಜಿ ಸಚಿವ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Ad Widget . Ad Widget .

ಸದ್ಯ ವಾಲ್ಮಿಕಿ ನಿಗಮದ ಲೆಕ್ಕಪರಿಶೋಧಕ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ನಾಗೇಂದ್ರ ಹೆಸರನ್ನು ಕೈ ಬಿಟ್ಟಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆಗೆ ನಿಗಮದ ಎಂಡಿ ಪದ್ಮನಾಭ್ ಮತ್ತು ಪರುಶರಾಮ್ ಕಾರಣ ಎಂದು ಉಲ್ಲೇಖಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿ ಒತ್ತಡ ನೀಡಿದ್ದಾರೆ ಎಂದು ಇಬ್ಬರ ಹೆಸರು ಉಲ್ಲೇಖಿಸಿದ್ದಾರೆ. ನಿಗಮದ ಹಗರಣದಲ್ಲಿ ಒಂದಿಷ್ಟು ಹಣವನ್ನು ಚಂದ್ರಶೇಖರ್ ಪಡೆದಿರುವುದಾಗಿಯೂ ಉಲ್ಲೇಖಿಸಲಾಗಿದೆ.

ಈ ಪ್ರಕರಣದಲ್ಲಿ ಮಾಜಿ ನಾಗೇಂದ್ರ ಹೆಸರು ಕೂಡ ಕೇಳಿ ಬಂದಿತ್ತು. ಇದರಿಂದಾಗಿ ವಿರೋಧಪಕ್ಷಗಳು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದರು ಬಳಿಕ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ಆದ್ರೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಎಸ್‌ಐಟಿ ತಂಡ ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಹೆಸರನ್ನು ಕೈಬಿಟ್ಟಿದೆ. ಎಸ್‌ಐಟಿ ಹಗರಣಕ್ಕೆ ಸಂಬಂಧಿಸಿದಂತೆ 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದು. ಚಂದ್ರಶೇಖರ ಹೆಂಡತಿ ಮತ್ತು ನಿಗಮದ ಅಧಿಕಾರಿಗಳನ್ನು ಸಾಕ್ಷ್ಯ ಮಾಡಿದ್ದಾರೆ.

Leave a Comment

Your email address will not be published. Required fields are marked *