ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ಜಗಳ| ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿಯ ನಡುವೆ ಜಗಳ ನಡೆದು, ಪತ್ನಿ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಸಮೀಪದ ಕಾರ್ಕಳ ಕಡಿದ ಹೆದ್ದಾರಿ ಎಂಬಲ್ಲಿ ನಡೆದಿದೆ.

Ad Widget ... ..

ಕೊಲೆಯಾದ ಜಯಶ್ರೀ (28) ಪತಿ ಕಿರಣ್‌ ಉಪಾಧ್ಯ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸಾಲಿಗ್ರಾಮ ಸಮೀಪದಲ್ಲಿರುವ ಕಾರ್ಕಡದ ಕಡಿದ ಹೆದ್ದಾರಿಯ ಅಂಗನವಾಡಿ ಕೇಂದ್ರದ ಬಳಿಯಲ್ಲಿರುವ ಬಾಡಿಗೆ ಮನೆಯಲ್ಲಿ ಈ ದಂಪತಿ ವಾಸವಾಗಿದ್ದರು. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ದಂಪತಿಗೆ ಮದುವೆಯಾಗಿತ್ತು. ಮುಂಜಾನೆ ಗಂಡ ಹೆಂಡತಿಯ ನಡುವೆ ಜಗಳ ನಡೆದಿದೆ.

Ad Widget

ಪತಿ ಕಿರಣ್‌ ಉಪಾಧ್ಯ ಗುಂಡ್ಮಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದೀಗ ಕೋಟ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ. ಆದರೆ ಕೊಲೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Leave a Comment

Your email address will not be published. Required fields are marked *