ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು‌ ನಡುವೆ ಅಪಘಾತ

ಸಮಗ್ರ ನ್ಯೂಸ್: ಮಡಿಕೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ 275ರ ಬೋಯಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು‌ ನಡುವೆ ಅಪಘಾತವಾಗಿದ್ದು ಕಾರಿನಲ್ಲಿ ಗಾಯಗೊಂಡ ತಾಯಿ ಮಗುವನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

Ad Widget ... ..

ಕೆಎಸ್‌ಆರ್‌ಟಿಸಿ ಬಸ್‌ ಮೈಸೂರಿನಿಂದ ಮಡಿಕೇರಿಗೆ ಬರುತ್ತಿತ್ತು. ಇತ್ತ ಕಾರಿನಲ್ಲಿ ಒಟ್ಟು ಆರು ಮಂದಿ ಕೇರಳದಿಂದ ಊಟಿಗೆ ತೆರಳುತ್ತಿದ್ದರು. ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿದ್ದು, ಕಾರು ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್‌ಗೆ ಕಾರು ಗುದ್ದಿದ ರಭಸಕ್ಕೆ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು. ಇನ್ನೂ ಈ ಅಪಘಾತದಿಂದ ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ಕಾರನ್ನು ತೆರವುಗೊಳಿಸಿದರು. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Ad Widget

Leave a Comment

Your email address will not be published. Required fields are marked *