Ad Widget .

ಉಡುಪಿ: ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ಯುವತಿ ಅಸ್ವಸ್ಥ| ಬಸ್ ಅನ್ನು ಆಸ್ಪತ್ರೆ ಕಡೆ ತಿರುಗಿಸಿ ಪ್ರಾಣ ಉಳಿಸಿದ ಸಿಬ್ಬಂದಿ

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೋರ್ವಳು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ (AKMS) ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಜೀವ ಉಳಿಸಿದ ಮಾನವೀಯ ಘಟನೆ ಕೃಷ್ಣ ನಗರಿ ಉಡುಪಿಯಲ್ಲಿ ಗುರುವಾರ ನಡೆದಿದೆ.

Ad Widget . Ad Widget .

ಬೆಳಗ್ಗೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ AKMS ಖಾಸಾಗಿ ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿ ಯೊಬ್ಬಳು ಹತ್ತಿದ್ದಾಳೆ. ಆದರೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ಈ ವಿದ್ಯಾರ್ಥಿನಿ ಏಕಾಏಕಿ ಅಸ್ವಸ್ಥಗೊಂಡಿದ್ದಳು.

Ad Widget . Ad Widget .

ಇದನ್ನು ಗಮನಿಸಿದ ಬಸ್ಸಿನ ಚಾಲಕ ನಸೀಫ್ ಹಾಗೂ ನಿರ್ವಾಹಕ ಮೋಹಿತ್ ಕೂಡಲೇ ಬಸ್ಸನ್ನು ಉಡುಪಿಯ ಟಿಎಂಎ. ಪೈ ಆಸ್ಪತ್ರೆಗೆ ಕೊಂಡೊಯ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸಿದ್ದಾರೆ. ಬಸ್ ಸಿಬಂದಿಯ ಈ ಮಾನವೀಯ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *