ಉಡುಪಿಯಲ್ಲಿ ಪತ್ನಿಯನ್ನು ಕಡಿದು ಕೊಂದು ಹಾಕಿದ ಪತಿ!

ಸಮಗ್ರ ನ್ಯೂಸ್: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ(30) ಕೊಲೆ ಆರೋಪಿಯಾಗಿದ್ದಾನೆ.

. Ad Widget . Ad Widget

ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ. ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮುಂಜಾನೆ ಪತ್ನಿಯನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದ ಎನ್ನುವ ಮಾಹಿತಿ ಇದೆ.

. Ad Widget . . Ad Widget . Ad Widget

ಶಂಕೆ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು,ಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಜಯಶ್ರೀ (31) ಬೀದರ್ ದೊಣಗಪುರ ಮೂಲದವರು. ಕಿರಣ್‌ ಗುರು ನರಸಿಂಹ ದೇವಸ್ಥಾನದಲ್ಲಿ ಎರಡು ವರ್ಷದಿಂದ ಅಡುಗೆ ಕೆಲಸ ಮಾಡುತ್ತಿದ್ದ. ಮನೆಯ ಟ್ಯಾರೆಸ್‌ನಿಂದ ಬಿದ್ದು ಜಯಶ್ರೀ ಗಾಯಗೊಂಡಿರುವುದಾಗಿ ಕಿರಣ್‌ ಹೇಳಿದ್ದಾನೆ. ಗಾಯಾಳು ಪತ್ನಿಯನ್ನು ಆಸ್ಪತ್ರೆಗೆ ಸೇರಿಸಿದ್ದ ಎನ್ನಲಾಗಿದೆ. ಸದ್ಯ ಉಡುಪಿಯ ಅಜ್ಜರ ಕಾಡು ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹ ಇದ್ದು, ಜಯಶ್ರೀ ಕುಟುಂಬಸ್ಥರ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ.

Leave a Comment

Your email address will not be published. Required fields are marked *