ಸಿಗರೇಟು ಸೇದುತ್ತಾ, ಕಾಫಿ ಕುಡಿಯುತ್ತಿರುವ ದರ್ಶನ್.. ಜೈಲಿನಲ್ಲಿ ದಾಸನಿಗೆ ರಾಜಾತ್ಯಿಥ್ಯ…?

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಆದರೆ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನ ಇದೀಗ ಮೂಡಿದೆ. ಹೌದು ದರ್ಶನ್ ಅವರ ಒಂದು ಫೋಟೋ ವೈರಲ್ ಆಗಿದೆ. ಅದರಲ್ಲಿ ಅವರು ಸಿಗರೇಟು ಸೇದುತ್ತಾ, ಕಾಫಿ ಕುಡಿಯುತ್ತಿರುವ ದೃಶ್ಯ ಸೆರೆಯಾಗಿದೆ. ವೈರಲ್ ಆಗಿರುವ ಫೋಟೋದಿಂದ ಅನೇಕ ಅನುಮಾನಗಳು ಮೂಡಿವೆ.

. Ad Widget . Ad Widget . Ad Widget

ದರ್ಶನ್ ಅವರು ಸ್ಪೆಷಲ್ ಬ್ಯಾಂಕ್ನಲ್ಲಿ ಇದ್ದು, ಇದೀಗ ಅಲ್ಲಿಂದ ಹೊರಬಂದು, ಮೂವರ ಜೊತೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ. ಕಾಫಿ ಮಗ್ ಹಿಡಿದುಕೊಂಡು ಅವರು ಕುಳಿತಿದ್ದಾರೆ. ಕೈಯಲ್ಲಿ ಸಿಗರೇಟ್ ಕೂಡ ಇದೆ. ಈ ಫೋಟೋ ವೈರಲ್ ಆಗಿದೆ. ಇನ್ನೂ ಯಾವೆಲ್ಲ ಸೌಕರ್ಯಗಳನ್ನು ನಟನಿಗೆ ನೀಡಿರಹುದು ಎಂಬ ಪ್ರಶ್ನೆಯನ್ನು ಈ ಫೋಟೋ ಹುಟ್ಟುಹಾಕಿದೆ. ಜೈಲು ಅಧಿಕಾರಿಗಳ ನಡೆಯ ಬಗ್ಗೆ ಅನುಮಾನ ಮೂಡುವಂತಾಗಿದೆ.

. Ad Widget .

ದರ್ಶನ್ ಹಾಗೂ ವಿಲ್ಸನ್ ಗಾರ್ಡನ್ ನಾಗ ಜೊತೆ ಮ್ಯಾನೇಜರ್ ನಾಗರಾಜ್ ಅವರೂ ಈ ಫೋಟೋದಲ್ಲಿ ಇದ್ದಾರೆ . ಮೂವರೂ ಕೈಯಲ್ಲಿ ಟೀ ಕಪ್, ಸಿಗರೇಟ್ ಹಿಡಿದುಕೊಂಡು ಹರಟೆ ಹೊಡೆಯುತ್ತಿರುವುದು ದೃಶ್ಯ ಕಂಡುಬಂದಿದೆ. ಈ ಫೋಟೋ ಇದೀಗ ಯಾವಾಗಿದ್ದು, ಜೈಲಿನಲ್ಲಿ ತೆಗೆದಿರುವಂತಹದ ಎಂಬ ಅನುಮಾನ ಮೂಡಿದೆ.

Leave a Comment

Your email address will not be published. Required fields are marked *