Ad Widget .

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ/ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಸಮಗ್ರ ನ್ಯೂಸ್‌: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರಿಗೆ ಕೊಟ್ಟ ಭರವಸೆಯಂತೆ 5 ಪ್ರಮುಖ ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Ad Widget . Ad Widget .

ನಮ್ಮ ಸರ್ಕಾರ ಜನರಿಗೆ ಮಾತು ನೀಡಿದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಧಿಕಾರಕ್ಕೆ ಬಂದು ಒಂದು ವರ್ಷ ಮೂರು ತಿಂಗಳಲ್ಲಿ ನಮ್ಮ ಐದು ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಎಲ್ಲಾ ಧರ್ಮ, ಜಾತಿಯ ಬಡವರಿಗೆ ಈ ಕಾರ್ಯಕ್ರಮಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ಜಾರಿಗೆ ಮುನ್ನ ಹಾಗೂ ನಂತರದಲ್ಲಿ ಬಹಳ ಟೀಕೆ ಮಾಡುತ್ತಿದ್ದರು. ಲೋಕಸಭಾ ಚುನಾವಣೆ ನಂತರ ಯೋಜನೆಗಳನ್ನು ನಿಲ್ಲಿಸುವುದಾಗಿಯೂ ಹೇಳಿದ್ದರು. ಯಾವ ಕಾರಣಕ್ಕೂ ಕೂಡ ಐದು ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಬೆಂಗಳೂರಿನಲ್ಲಿ ತಿಳಿಸಿದರು.

Ad Widget . Ad Widget .

ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ವಿರುದ್ಧವಾಗಿದ್ದಾರೆ. ಶಕ್ತಿ, ಅನ್ನ ಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ, ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳಾಗಿವೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು, ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ ಎಂದರು.

Leave a Comment

Your email address will not be published. Required fields are marked *