Ad Widget .

ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ/ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆಯಾದ ಚಿರಾಗ್ ಪಾಸ್ವಾನ್

ಸಮಗ್ರ ನ್ಯೂಸ್‌: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರನ್ನು ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಪಕ್ಷದ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಿದೆ.

Ad Widget . Ad Widget .

ಲೋಕಜನಶಕ್ತಿ ಪಕ್ಷದ(ರಾಮ್ ವಿಲಾಸ್) ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾದ ಕೇಂದ್ರ ಆಹಾರ ಸಂಸ್ಕರಣೆ ಮತ್ತು ಕೈಗಾರಿಕೆಗಳ ಸಚಿವ ಮತ್ತು ಹಾಜಿಪುರ ಲೋಕಸಭಾ ಕ್ಷೇತ್ರದ ಸಂಸದ ಚಿರಾಗ್ ಪಾಸ್ವಾನ್ ಅವರಿಗೆ ಹೃತ್ತೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ರಾಷ್ಟ್ರೀಯ ಕಾರ್ಯಕಾರಿ ಸಭೆ ಪಾಸ್ವಾನ್ ಅವರ ನಾಯಕತ್ವದಲ್ಲಿ ತನ್ನ ವಿಶ್ವಾಸವನ್ನು ವ್ಯಕ್ತಪಡಿಸಿದೆ, ನಿಮ್ಮ ಸಮರ್ಥ ನಾಯಕತ್ವದಲ್ಲಿ ಪಕ್ಷವು ಸಂಪೂರ್ಣ ನಂಬಿಕೆಯನ್ನು ಹೊಂದಿದೆ. ನಿಮ್ಮ ಮಾರ್ಗದರ್ಶನದಲ್ಲಿ ಹೊಸ ಎತ್ತರವನ್ನು ಸಾಧಿಸುತ್ತದೆ ಎಂದು ನಂಬುತ್ತದೆ ಎಂದು ಎಕ್ಸ್ ನಲ್ಲಿ ತಿಳಿಸಲಾಗಿದೆ.

Ad Widget . Ad Widget .

ಪಕ್ಷದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಕ್ಕೆ ಚಿರಾಗ್ ಪಾಸ್ವಾನ್ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ತಂದೆ ದಿವಂಗತ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ದೂರದೃಷ್ಟಿಯಂತೆ ಪಕ್ಷವನ್ನು ಕಟ್ಟಲು ಪಣ ತೊಟ್ಟರು. ಪಕ್ಷದ ಎಲ್ಲಾ ನಿಷ್ಠಾವಂತ ಕಾರ್ಯಕರ್ತರು ಮತ್ತು ಪದಾಧಿಕಾರಿಗಳಿಗೆ ನನ್ನ ಹೃತ್ತೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ರಾಮ್ ವಿಲಾಸ್ ಪಾಸ್ವಾನ್ ಅವರ ಕನಸುಗಳ ಪಕ್ಷವನ್ನು ಕಟ್ಟಲು ನಾನು ಬದ್ಧನಾಗಿರುತ್ತೇನೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.

Leave a Comment

Your email address will not be published. Required fields are marked *