Ad Widget .

ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ| ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು| ಶೀಘ್ರದಲ್ಲಿ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ – ಸಿಎಂ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಆಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದಡಿ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್‌ ಶರಣಪ್ಪ ಪ್ರಭು, ಎಸ್‌ ಖಂಡೇಲ್‌ ವಾಲ್, ಅಸಿಸ್ಟೆಂಟ್ ಜೈಲರ್‌ ಎಲ್‌.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲ್ವಾರ್, ಹೆಡ್‌ ವಾರ್ಡರ್‌ ವೆಂಕಪ್ಪ, ಸಂಪತ್ ಕುಮಾರ್, ವಾರ್ಡರ್ ಬಸಪ್ಪ ತೇಲಿ ಎಂಬವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

Ad Widget . Ad Widget .

ನಟ ದರ್ಶನ್‌ ಜೈಲಿನೊಳಗೆ ಬೆಡ್ ಮೇಲೆ ಕುಳಿತು ವಿಡಿಯೋ ಕಾಲ್ ಮೂಲಕ ಮಾತನಾಡಿರುವ ವಿಡಿಯೋ ಮತ್ತು ಇತರ ಆರೋಪಿಗಳಾದ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ಮ್ಯಾನೇಜರ್ ನಾಗರಾಜ್ ಜೊತೆ ಕುಳಿತು ಸಿಗರೇಟ್ ಸೇದುತ್ತಾ ಹರಟೆ ಹೊಡೆಯುತ್ತಿದ್ದ ಫೋಟೋ ವೈರಲ್ ಆಗಿತ್ತು.

ಪರಿಣಾಮ ಆರೋಪಿ ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *