ಕೊಟ್ಟಿಗೆಹಾರ: ಶಿಕ್ಷಕರ ಕೊರತೆ ಈಡೇರಿಸುವಂತೆ ಪೋಷಕರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆ .26 ರಂದು ಪ್ರತಿಭಟನೆ ನಡೆಸಿದರು.

Ad Widget ... ..

ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ತೊಂದರೆ ಆಗುತ್ತಿದ್ದು, ಶತಮಾನದ ಶಾಲೆಗೆ ಶಿಕ್ಷಕರನ್ನು ವರ್ಗಾವಣೆ ಮಾಡಿದೆ ನಿರ್ಲಕ್ಷ್ಯ ಮಾಡಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪೋಷಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

1 ರಿಂದ 7 ನೇ ತರಗತಿಗೆ ತನಕ ಇರುವ ಶಾಲೆಗೆ ಇಬ್ಬರೇ ಶಿಕ್ಷಕರು.ಅಲ್ಲದೇ 75 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸರ್ಕಾರಿ ಶಾಲೆಯಲ್ಲಿ ವಿದ್ಯಭ್ಯಾಸ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಕರನ್ನು ನೇಮಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟಿಸಿದ್ದಾರೆ.

Leave a Comment

Your email address will not be published. Required fields are marked *