ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿತ್ತು.
ಶ್ರೀ ಮಾತಾ ವೈಷ್ಟೋದೇವಿ ಕ್ಷೇತ್ರದಿಂದ ರೋಹಿತ್ ದುಬೆ ಅವರಿಗೆ ಟಿಕೆಟ್ ನೀಡಲಾಗಿದೆ. ಸುನೀಲ್ ಶರ್ಮಾ ಕಿಶ್ಚಾರ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಈ ಬಾರಿ ಬಿಜೆಪಿ ಹೊಸ ತಂತ್ರದೊಂದಿಗೆ ಚುನಾವಣಾ ಕಣಕ್ಕೆ ಇಳಿದಿರುವುದು ಪಟ್ಟಿಯಿಂದ ಸ್ಪಷ್ಟವಾಗಿದೆ. ಪಕ್ಷವು ತನ್ನ ಹಲವು ಹಳೆಯ ನಾಯಕರ ಟಿಕೆಟ್ ಗಳನ್ನು ರದ್ದುಗೊಳಿಸಿದೆ. ಬೇರೆ ಪಕ್ಷಗಳ ಯುವ ನಾಯಕರಿಗೂ ಬಿಜೆಪಿ ಅವಕಾಶ ನೀಡಿದೆ. ಮೊದಲ ಹಂತದ ನಾಮಪತ್ರ ಸಲ್ಲಿಕೆಗೆ ಆಗಸ್ಟ್ 27 ಕೊನೆಯ ದಿನವಾಗಿರುವುದರಿಂದ ಸೋಮವಾರವೇ ಪಟ್ಟಿ ಬಿಡುಗಡೆ ಮಾಡುವುದು ಬಿಜೆಪಿಗೆ ಅನಿವಾರ್ಯವಾಗಿತ್ತು.