Ad Widget .

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ | ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿ

ಸಮಗ್ರ ನ್ಯೂಸ್: ನಾಡಿನೆಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಸಂಧರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು.

Ad Widget . Ad Widget .

ಇಸ್ಕಾನ್‌ನಲ್ಲಿ ಮುಂಜಾನೆ 4:3ರಿಂದ ರಾಧಾ-ಕೃಷ್ಣರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮುಂಜಾನೆ 4:30ಕ್ಕೆ ಕೃಷ್ಣನಿಗೆ ಮಂಗಳಾರತಿ ಮತ್ತು ತುಳಸಿ ಆರತಿ ಮಾಡಿ ಬಳಿಕ 7:30ಕ್ಕೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಜನ್ಮಾಷ್ಟಮಿ ಹಿನ್ನೆಲೆ ಇಂದು ಕೃಷ್ಣನಿಗೆ 4 ವಿಶೇಷ ಅಭಿಷೇಕ ನೆರವೇರಿಸಲಾಗುತ್ತದೆ. ಇಂದು ಬೆಳಗ್ಗೆ 7.30 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದೆ.

Ad Widget . Ad Widget .

ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ದುಷ್ಟರನ್ನು ಸಂಹಾರ ಮಾಡಿ ಶಿಷ್ಟರನ್ನು ರಕ್ಷಿಸುವುದು ಕೃಷ್ಣನ ಕೆಲಸ. ದುಷ್ಟರನ್ನು ಸಂಹಾರ ಮಾಡಿ, ಶಿಷ್ಟರನ್ನು ರಕ್ಷಿಸುವ ಕೆಲಸ ಕೃಷ್ಣ ಮಾಡುತ್ತಾನೆ ಅನ್ನೋ ವಿಶ್ವಾಸವಿದೆ. ಭಾರತವನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಮಾಡಲಿ ಎಂದರು.

Leave a Comment

Your email address will not be published. Required fields are marked *