Ad Widget .

ಕಾರ್ಕಳ ಅತ್ಯಾಚಾರ ಪ್ರಕರಣ| ಮತ್ತೊರ್ವ ಆರೋಪಿ ಅಭಯ್ ಅರೆಸ್ಟ್| ಈತ ಬಿಜೆಪಿ ಕಾರ್ಯಕರ್ತನಂತೆ!!

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಕೇಸ್ ಗೆ ಸಂಬಂಧಿಸಿ ಕಾರ್ಕಳ ಠಾಣೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಭಯ್ ಎಂದು ಗುರುತಿಸಲಾಗಿದೆ. ಅತ್ಯಾಚಾರಿ ಅಲ್ತಾಫ್ ಗೆ ಡ್ರಗ್ಸ್ ಪೂರೈಕೆ ಮಾಡಿದ ಹಿನ್ನಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ, ಕಾರ್ಕಳ ತೆಲ್ಲಾರು ನಿವಾಸಿ ಅಭಯ್ ಶಾಸಕ ಸುನೀಲ್ ಕುಮಾರ್‌ ಅವರ ಭಕ್ತ, ಬಿಜೆಪಿ ಕಾರ್ಯಕರ್ತ, ಭಜರಂಗದಳ ಕಾರ್ಯಕರ್ತನೂ ಆಗಿದ್ದಾನೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

Ad Widget . Ad Widget .

ಈತ ಕಾಪುವಿನ ವ್ಯಕ್ತಿಯೊಂದಿಗೆ ಸೇರಿಕೊಂಡು ಟಿಪ್ಪರ್ ಖರೀದಿಸಿದ್ದ ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪನಿ ಮುಟ್ಟುಗೋಲು ಹಾಕಿಕೊಂಡ ನಂತರ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.

ಅಲ್ತಾಫ್ ಹಾಗೂ ಅಭಯ್ ಇಬ್ಬರೂ ಕಾರ್ಕಳ ಜೋಡುರಸ್ತೆ ಬಳಿ ಟಿಪ್ಪರ್ ನಿಲ್ಲಿಸುತ್ತಿದ್ದರು. ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು, ಇವರಿಬ್ಬರೂ ಒಟ್ಟಿಗೆ ತಿರುಗಾಡುತ್ತಿದ್ದಾರೆಂದು ಸಾರ್ವಜನಿಕರು ತಿಳಿಸಿದ್ದಾರೆ.

ಇನ್ನು ಅಭಯ್ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಡ್ರಗ್ ನೀಡಿದ್ದ ಆರೋಪಿ ಬಿಜೆಪಿಯ ನಾಯಕರೊಂದಿಗೆ ಗುರುತಿಸಿಕೊಂಡಿದ್ದಾಗಿಯೂ ಚರ್ಚೆಯಾಗುತ್ತಿದೆ. ಇದು ಬಿಜೆಪಿಗೆ ಮುಖಭಂಗ ಉಂಟುಮಾಡಿದೆ. ಅತ್ಯಾಚಾರ ಎಸಗಿದ ಇತರ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *