Ad Widget .

ಮಹಾರಾಷ್ಟ್ರ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ| ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ರತ್ನಗಿರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮೈದಾನದ ಸಮೀಪ ಪತ್ತೆಯಾದ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ದೇಹದ ತುಂಬಾ ಗಾಯಗಳಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Ad Widget . Ad Widget .

ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ, ಕೊಲೆ ಇಡೀ ದೇಶವನ್ನೇ ನಿದ್ದೆಗೆಡುವಂತೆ ಮಾಡಿದೆ. ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳಲಾಗುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಲ್ಲೇ ನಡೆದ ದೌರ್ಜನ್ಯ ಆಕ್ರೋಶಕ್ಕೆ ಕಾರಣವಾಗಿದೆ.

Ad Widget . Ad Widget .

ಆಸ್ಪತ್ರೆಯ ಮೂಲಗಳ ಪ್ರಕಾರ, ವಿದ್ಯಾರ್ಥಿನಿಗೆ ಅನೇಕ ಗಾಯಗಳಾಗಿದ್ದು, ಅತ್ಯಾಚಾರ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯು ರತ್ನಗಿರಿಯ ನರ್ಸಿಂಗ್ ಸಮುದಾಯದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ದಾಳಿಯಿಂದ ತೀವ್ರ ಕೋಪಗೊಂಡ ನರ್ಸ್ ಗಳು ಮತ್ತು ಆಸ್ಪತ್ರೆ ಸಿಬ್ಬಂದಿ, ಅಪರಾಧಕ್ಕೆ ಕಾರಣರಾದವರಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಗಳು ಉಲ್ಬಣಗೊಂಡಿದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಇತರ ಬೆಂಬಲಿಗರೊಂದಿಗೆ ಬೀದಿಗಿಳಿದು ರತ್ನಗಿರಿಯ ಹಲವು ಭಾಗಗಳಲ್ಲಿ ಸಂಚಾರವನ್ನು ನಿರ್ಬಂಧಿಸಿದರು. ಪ್ರತಿಭಟನಾಕಾರರು ಬ್ಯಾನರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿ, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಪರಿಸ್ಥಿತಿಯು ನಗರದಲ್ಲಿ ಗಮನ ಹರಿಸಿ ಅಧಿಕಾರಿಗಳು ತನಿಖೆಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿ, ಶಾಂತಿಯಿಂದ ಇರುವಂತೆ ಮನವಿ ಮಾಡಿದರು.

Leave a Comment

Your email address will not be published. Required fields are marked *