Ad Widget .

ಹಣ ಖರ್ಚು ಮಾಡಿದರೆ ಜೈಲಿನಲ್ಲಿ ಎಲ್ಲವೂ ಸಿಗುತ್ತದೆ: ಮಾಜಿ ಸಂಸದೆ ಸುಮಲತಾ

ಸಮಗ್ರ ನ್ಯೂಸ್: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸ್ವೀಕರಿಸುತ್ತಿರುವ ಚಿತ್ರಗಳು ವೈರಲ್ ಆಗಿದ್ದು, ಸರ್ಕಾರ ಇದೀಗ ಈ ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಿದೆ. ಏಳು ಮಂದಿ ಜೈಲು ಸಿಬ್ಬಂದಿಯ ಅಮಾನತ್ತು ಸಹ ಮಾಡಲಾಗಿದೆ. ಹಾಗೇ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಮಾಡಲು ಇದೀಗ ಕೋರ್ಟ್ ಅನುಮತಿ ನೀಡಿದೆ.

Ad Widget . Ad Widget .

ಇಂದು ಇದೇ ವಿಚಾರವಾಗಿ ಮಾಜಿ ಸಂಸದೆ, ದರ್ಶನ್ ಆಪ್ತೆ ಸುಮಲತಾ ಮಾತನಾಡಿ ‘ಜೈಲಿನಲ್ಲಿ ಇದು ಸಾಮಾನ್ಯ’ ಎಂದಿದ್ದಾರೆ. ದರ್ಶನ್ ನಮಗೆ ಆಪ್ತರು. ನಾನು ಮಾತನಾಡಿದರೆ ವಿವಾದ ಆಗುತ್ತೆ, ಆದರೆ ಎಲ್ಲರಿಗೂ ಗೊತ್ತಿರುವ ವಿಚಾರವೆಂದರೆ, ಜೈಲಲ್ಲಿ ಹೀಗೆ ನಡೆಯುತ್ತಿರುವುದು ಇದು ಮೊದಲಾ? ಈಗ ದರ್ಶನ್ ಪ್ರಕರಣದ ಬಗ್ಗೆ ಪ್ರಶ್ನೆ ಮಾಡುತ್ತಿರುವ ಮಾಧ್ಯಮಗಳು ಈ ಮುಂಚೆ ಏಕೆ ಕೇಳಲಿಲ್ಲ?’ ಎಂದು ಪ್ರಶ್ನೆ ಮಾಡಿದ್ದಾರೆ. ಮುಂದುವರೆದು, ‘ಐಪಿಎಸ್ ಅಧಿಕಾರಿ ರೂಪಾ ಅವರು ಈ ಮೊದಲು ಸಹ ಈ ಬಗ್ಗೆ ಪ್ರಶ್ನೆ ಮಾಡಿದ್ದರು. ಜೈಲಿನಲ್ಲಿ ನಡೆಯುತ್ತಿರುವ ಅವ್ಯಹಾರಗಳನ್ನು ಬಯಲು ಮಾಡಿದ್ದರು. ಆಗ ನೀವು ಸಹ ಪ್ರಶ್ನೆ ಮಾಡಿರಲಿಲ್ಲ ಏಕೆ?’ ಎಂದು ಮಾಧ್ಯಮಗಳನ್ನು ಸುಮಲತಾ ಪ್ರಶ್ನೆ ಮಾಡಿದರು. ಇಷ್ಟು ದಿನ ದರ್ಶನ್ ನನ್ನು ಮಗ ಎನ್ನುತ್ತಿದ್ದ ಸುಮಲತಾ ಇದೀಗ ಆಪ್ತ ಎಂದಿರುವುದು ಸಂಚಲನ ಮೂಡಿಸಿದೆ.

Ad Widget . Ad Widget .

ಸ್ವಲ್ಪ ಹಣ ಖರ್ಚು ಮಾಡಿದರೆ ಜೈಲಿನಲ್ಲಿ ಎಲ್ಲವೂ ಸಿಗುತ್ತದೆ, ಪರಪ್ಪನ ಅಗ್ರಹಾರ ಮಾತ್ರವಲ್ಲ, ಪ್ರತಿ ಜೈಲಿನಲ್ಲಿಯೂ ಇದು ನಡೆಯುತ್ತಿದೆ. ಇದು ಗುಟ್ಟೇನೂ ಅಲ್ಲ. ಅಮೆರಿಕ ಜೈಲಿನಲ್ಲಿ, ಮೊಬೈಲ್ ಫೋನ್, ಸಿಗರೇಟು, ಡ್ರಗ್ಸ್ ಸಹ ಸಿಗುತ್ತೆ’ ಎಂದಿದ್ದಾರೆ. ಮುಂದುವರೆದು ಮಾತನಾಡಿ, ‘ಈಗ ನಡೆದಿರುವುದು ಸರಿಯಲ್ಲ, ಆದರೆ ಇದು ಭ್ರಷ್ಟಾಚಾರ. ವ್ಯವಸ್ಥೆಯಲ್ಲಿರುವ ಭ್ರಷ್ಟಾಚಾರವಿದು. ಆದರೆ ನೀವು (ಮಾಧ್ಯಮಗಳು) ಒಬ್ಬ ವ್ಯಕ್ತಿಯನ್ನು ಯಾಕೆ ಗುರಿ ಮಾಡಿಕೊಳ್ಳುತ್ತಿದ್ದೀರಿ? ಪ್ರಶ್ನೆ ಮಾಡಬೇಕಿರುವುದು, ಜೈಲಿನ ಅಧಿಕಾರಿಗಳನ್ನು, ಇಲಾಖೆಯನ್ನು, ಜೈಲು ವ್ಯವಸ್ಥೆಯನ್ನು ಸರಿಮಾಡಬೇಕಾದುದು ಸಚಿವಾಲಯ ಜವಾಬ್ದಾರಿ’ ಎಂದು ಸಹ ಸುಮಲತಾ ಹೇಳಿದ್ದಾರೆ.

ರೌಡಿಶೀಟರ್ಗಳ ಜೊತೆಗೆ ದರ್ಶನ್ ಒಡನಾಟ ಬಗ್ಗೆ ಉತ್ತರಿಸಿರುವ ಸುಮಲತಾ, ಜೈಲಿನಲ್ಲಿ ಒಳ್ಳೆಯವರು ಇರಲು ಸಾಧ್ಯವಾ? ಇರೋರೆಲ್ಲ ಕೆಟ್ಟವರೇ ಅಲ್ಲವ? ಇನ್ಯಾರನ್ನು ಅವರು ಮಾತನಾಡಿಸಬೇಕು? ಎಂದು ಸುಮಲತಾ ಕೇಳಿದ್ದಾರೆ.

Leave a Comment

Your email address will not be published. Required fields are marked *