ಸಮಗ್ರ ನ್ಯೂಸ್: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕರೆ ನೀಡಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಆ.31ರಂದು ರಾಜಭವನ ಚಲೋಗೆ ಕರೆ ನೀಡಿ, ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ. ಎಚ್.ಡಿ ಕುಮಾರಸ್ವಾಮಿ, ರೆಡ್ಡಿ, ನಿರಾಣಿ, ಜೊಲ್ಲೆ ವಿರುದ್ಧ ಅನುಮತಿ ಕೊಟ್ಟಿಲ್ಲ, ಈ ನಾಲ್ವರ ವಿರುದ್ದ ಪ್ರಾಸಿಕ್ಯೂಷನ್ ಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತೇವೆ. ಈ ಹಿನ್ನಲೆ ಎಲ್ಲ ಶಾಸಕರು, ಸಚಿವರು, ಪರಿಷತ್ ಸದಸ್ಯರು ಭಾಗಿಯಾಗಬೇಕು ಎಂದು ಸೂಚನೆ ನೀಡಿದ್ದಾರೆ