Ad Widget .

ಕಡಬ: ಸ್ಕೂಟರ್ ಸ್ಕಿಡ್ ಆಗಿ ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ.

Ad Widget . Ad Widget .

ಗಾಯಗೊಂಡವರನ್ನು ಕೋಡಿಂಬಾಳ ನಿವಾಸಿ ಚೋಮ(40) ಎಂದು ಗುರುತಿಸಲಾಗಿದೆ. ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮರವರು, ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದರು.

Ad Widget . Ad Widget .

ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದ್ದು, ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಚೋಮರವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *