Ad Widget .

ಹಸುಗಳನ್ನು ನದಿಗೆಸೆದ ಕ್ರೂರಿಗಳು | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್; ನಾಲ್ವರ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಹಲವಾರು ಹಸುಗಳನ್ನು ವ್ಯಕ್ತಿಗಳ ಗುಂಪೊಂದು ನದಿಗೆ ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರಾಥಮಿಕ ವರದಿಗಳ ಪ್ರಕಾರ, ನಾಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ (ಆ 27) ಸಂಜೆ ಸಂಭವಿಸಿದ ಘಟನೆಯಲ್ಲಿ 15 ರಿಂದ 20 ಹಸುಗಳು ಸಾವನ್ನಪ್ಪಿವೆ. ಆದರೆ ಮಾಹಿತಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ಬುಧವಾರ(ಆ 28) ತಿಳಿಸಿದ್ದಾರೆ.

Ad Widget . Ad Widget . Ad Widget .

ಬಮ್ಹೋರ್ ಬಳಿಯ ರೈಲ್ವೇ ಸೇತುವೆಯ ಕೆಳಗಿರುವ ಸಾತ್ನಾ ನದಿಗೆ ಕೆಲವರು ಹಸುಗಳನ್ನು ಎಸೆಯುತ್ತಿರುವುದನ್ನು ತೋರಿಸುವ ವಿಡಿಯೋವೊಂದು ಹೊರಬಿದ್ದಿದೆ. ವಿಡಿಯೋ ಮಾಹಿತಿ ಸಂಗ್ರಹಿಸಲು ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ನಾಗೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪ್ರಭಾರಿ ಅಶೋಕ್ ಪಾಂಡೆ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಟಾ ಬಗ್ರಿ, ರವಿ ಬಗ್ರಿ, ರಾಂಪಾಲ್ ಚೌಧರಿ ಮತ್ತು ರಾಜ್ಲು ಚೌಧರಿ ಎಂದು ಗುರುತಿಸಲಾಗಿದ್ದು, ನಾಲ್ವರ ವಿರುದ್ಧ ಮಧ್ಯಪ್ರದೇಶ ಗೌವಂಶ್ ವಧ್ ಪ್ರತಿಶೇಧ್ ಅಧಿನಿಯಮ್, ರಾಜ್ಯದಲ್ಲಿ ಗೋಹತ್ಯೆ ತಡೆಯುವ ಕಾನೂನಿನ ಸಂಬಂಧಿತ ವಿಭಾಗಗಳು ಮತ್ತು ಭಾರತೀಯ ನ್ಯಾಯದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *