Ad Widget .

ಮುಡಾ ಹಗರಣ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಅನುಮತಿ ಪ್ರಕರಣ| ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಆಲಿಸಿದಂತ ನ್ಯಾಯಪೀಠವು ಆಗಸ್ಟ್.31ಕ್ಕೆ ವಿಚಾರಣೆಯನ್ನು ಮುಂದೂಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ನ್ಯಾಯಪೀಠದಲ್ಲಿ ನಡೆಸಲಾಯಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ರಾಜ್ಯಪಾಲರು ತರಾತುರಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮನವರಿಕೆ ಮಾಡಿಕೊಟ್ಟರು.

Ad Widget . Ad Widget . Ad Widget .

ಇದಷ್ಟೇ ಅಲ್ಲದೇ ಶಶಿಕಲಾ ಜೊಲ್ಲೆ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಯಾವುದೇ ಉತ್ತರ ನೀಡಿಲ್ಲ. ಆದರೇ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಅನುಮತಿ ಕೋರಿದ ಕೆಲವೇ ದಿನಗಳಲ್ಲಿ ನೀಡಲಾಗಿದೆ ಎಂಬುದಾಗಿ ವಾದಿಸಿದರು.

ಈ ವಾದವನ್ನು ಆಲಿಸಿದ ನಂತ್ರ ಹೈಕೋರ್ಟ್, ಪ್ರತಿವಾದಿಗಳ ವಾದವನ್ನು ಆಲಿಸುವುದಕ್ಕೆ ಸಮಯಾವಕಾಶ ಕೋರಿದ ಕಾರಣ ಆಗಸ್ಟ್.31ರ ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆಯನ್ನು ಮುಂದೂಡಿದೆ.

Leave a Comment

Your email address will not be published. Required fields are marked *