ಹವಾಮಾನ ವರದಿ: ವಾಯುಭಾರ ಕುಸಿತ ಹಿನ್ನೆಲೆ| ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ| ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಇಂದಿನಿಂದ ಮೂರು ದಿನ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

Ad Widget

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಡಗು, ಕಲಬರಗಿ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ವಿಜಯಪುರ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *