ಪುತ್ತೂರು: ಆಡಿಯೋ ವೈರಲ್ ಬೆನ್ನಲ್ಲೇ ಮಹಿಳೆಗೆ ಬೆದರಿಕೆ ಕರೆ; ದೂರು ದಾಖಲು

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಮಹಿಳೆಯದ್ದು ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಮಹಿಳೆ ನಿನ್ನೆ ರಾತ್ರಿ (ಆ.29) ಆರೋಪಿಸಿ ದೂರು ನೀಡಲು ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿರುವ ಬಗ್ಗೆ ತಿಳಿದುಬಂದಿದೆ.

Ad Widget ... ..

ಆಡಿಯೋ ವೈರಲ್ ಬಳಿಕ ಮಹಿಳೆಗೆ ಹಲವಾರು ಬೆದರಿಕೆ ಕರೆಗಳು ಬಂದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದು ಪೊಲೀಸ್ ಇನ್ಸ್ಪೆಕ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

ತಡರಾತ್ರಿ ಠಾಣೆಗೆ ಬಂದ ಮಹಿಳೆಯನ್ನು ಬಳಿಕ ಆಟೋ ರಿಕ್ಷಾದಲ್ಲಿ ತೆರಳುವಂತೆ ಸೂಚಿಸಿದ ಪೊಲೀಸರು ಹಿಂದಿನಿಂದ ಪೊಲೀಸ್ ಜೀಪಿನಲ್ಲಿ ಮನೆಯ ತನಕ ಭದ್ರತೆ ನೀಡಿದರು ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *