ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. ಜಮಾ ಮಾಡಲಾಗಿದೆ.
2023ರ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ್ ರಾಹುಲ್ ಗಾಂಧಿ ಯೋಜನೆಗೆ ಚಾಲನೆ ನೀಡಿದ್ದರು.
ಬಜೆಟ್ ನಲ್ಲಿ 28,608 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಯೋಜನೆಗೆ ಹಣಕಾಸು ಮುಗ್ಗಟ್ಟು ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 9.83 ಲಕ್ಷ ಫಲಾನುಭವಿಗಳಿದ್ದು, ಪ್ರಥಮ ಸ್ಥಾನದಲ್ಲಿದೆ. 1.15 ಲಕ್ಷ ಫಲಾನುಭವಿ ಮಹಿಳೆಯರು ಇರುವ ಕೊಡಗು ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 8.20 ಲಕ್ಷ ಫಲಾನುಭವಿಗಳಿದ್ದಾರೆ.