Ad Widget .

ಕೇಂದ್ರ ಸರ್ಕಾರದಿಂದ ದ. ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 10.32 ಕೋಟಿ ರೂ. ಅನುದಾನ ಬಿಡುಗಡೆ; ಕ್ಯಾ. ಬ್ರಿಜೇಶ್ ಚೌಟ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಜನ್ ಮನ್ (ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದ. ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬುಡಕಟ್ಟು ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ಈ ಪಿಎಂ ಜನ್ ಮನ್ ಯೋಜನೆಯಡಿ 2024-25ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಗುರುತಿಸಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಈ ಅನುದಾನವನ್ನು ನೀಡಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ.

Ad Widget . Ad Widget . Ad Widget .

ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿರುವ ಒಟ್ಟು 10.32ಕೋಟಿ ರೂ.ಗಳ ಅನುದಾನದ ಪೈಕಿ ಸುಮಾರು 7.80 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಬಾಕಿಯಿದೆ. ಹೀಗಿರುವಾಗ, ಆದ್ಯತೆ ಮೇರೆಗೆ ಆಡಳಿತಾತ್ಮಕ ಅನುಮೋದನೆ ನೀಡಿ ಕಾಮಗಾರಿ ತ್ವರಿತ ಅನುಷ್ಠಾನಗೊಳಿಸುವಂತೆ ಕೋರಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ ಎಂದಿದ್ದಾರೆ.

ಸುಳ್ಯದ ಪಂಜಕ್ಕೂ ಪಿಎಂ ಜನ್ ಮನ್ ಅನುದಾನ ಬಳಕೆ ಪಿಎಂ ಜನ್ ಮನ್ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ಅಟ್ರಿಂಜೆಯಿಂದ – ಸುಕ್ಕೇರಿ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ 285.7 ಲಕ್ಷ ರೂ., ಅಟ್ರಿಂಜೆಯಿಂದ- ಸುಳ್ಳೇರಿ ಸಂಪರ್ಕಿಸುವ ರಸ್ತೆ ಸೇತುವೆ ನಿರ್ಮಾಣಕ್ಕೆ 267.00 ಲಕ್ಷ ರೂ., ಪುತ್ತೂರು ತಾಲೂಕಿನ ಹಳೆನೀರಂಕಿ ಗ್ರಾಮದ ಪರಾಕಲು ಎಸ್.ಟಿ ಕಾಲೋನಿ ರಸ್ತೆಯಿಂದ ಅಲಂಕಾರ್ ರಸ್ತೆ ಅಭಿವೃದ್ಧಿಗೆ 228.05 ಲಕ್ಷ ರೂ., ಮಂಗಳೂರು ತಾಲೂಕಿನ ಮಧ್ಯ ಗ್ರಾಮ, ಬಂಟ್ವಾಳದ ಕೇಪು ಗ್ರಾಮ, ಬೆಳ್ತಂಗಡಿಯ ನಾರಾವಿ ಗ್ರಾಮ ಹಾಗೂ ಸುಳ್ಯದ ಪಂಜ ಗ್ರಾಮದಲ್ಲಿ ತಲಾ ಒಂದು ಬಹು ಉದ್ದೇಶಿತ ಕೇಂದ್ರ ನಿರ್ಮಾಣಕ್ಕೆ 2.40 ಕೋಟಿ ರೂ. ಹಾಗೂ ಮಂಗಳೂರು ತಾಲೂಕಿನ ಮಧ್ಯ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 12 ಲಕ್ಷ ರೂ. ಸೇರಿ ಕೇಂದ್ರವು ಒಟ್ಟು 10.32 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ.ಚೌಟ ಹೇಳಿದ್ದಾರೆ.

Leave a Comment

Your email address will not be published. Required fields are marked *