ಸಮಗ್ರ ನ್ಯೂಸ್: ಧರ್ಮಸ್ಥಳದ ಪಾಂಗಾಳ ಸಮೀಪ ಹನ್ನೆರಡು ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಆದೇಶ ಹೊರಬಿದ್ದಿದೆ.
ಪ್ರಕರಣದ ಮರುತನಿಖೆ ನಡೆಸುವಂತೆ ಸೌಜನ್ಯ ಪೋಷಕರು ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶೀಸಿತ್ತು.
ಇಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಬಿದ್ದಿದ್ದು, ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರಿದ್ದ ಪೀಠವು ಮರುತನಿಖೆ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.
ತನ್ನದಲ್ಲದ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿರುವ ಸಂತೋಷ್ ರಾವ್ ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯೂ ವಜಾಗೊಂಡಿದ್ದಾಗಿ ತಿಳಿದುಬಂದಿದೆ. ಸಂತೋಷ್ ರಾವ್ ಖುಲಾಸೆಗೊಳಿಸಿದ್ದ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.