Ad Widget .

ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌. ಶ್ರೀನಿವಾಸ್‌ ಇನ್ನಿಲ್ಲ

ಸಮಗ್ರ ನ್ಯೂಸ್: ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌. ಶ್ರೀನಿವಾಸ್‌ ಅವರು ಇಂದು (ಆ.30)ನಿಧನರಾಗಿದ್ದಾರೆ.

Ad Widget . Ad Widget .

ಸಾಗರ ತಾಲ್ಲೂಕು ಕಾನುಗೋಡು ಗ್ರಾಮದ ಶ್ರೀನಿವಾಸ್‌ ಜನತಾ ಪರಿವಾರದಲ್ಲಿ ಗುರುತಿಸಿಕೊಂಡು, ಆನಂತರ ಕಾಂಗ್ರೆಸ್‌ನಲ್ಲೂ ಇದ್ದವರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು.

Ad Widget . Ad Widget .

ಕೃಷಿಕರಾಗಿ, ವಕೀಲರಾಗಿದ್ದುಕೊಂಡೇ ರಾಜಕೀಯ ಪ್ರವೇಶಿಸಿದ್ದರು. ಕೆಲವು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಹೈಕೋರ್ಟ್‌ನಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು.

Leave a Comment

Your email address will not be published. Required fields are marked *