ಸಮಗ್ರ ನ್ಯೂಸ್: ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್. ಶ್ರೀನಿವಾಸ್ ಅವರು ಇಂದು (ಆ.30)ನಿಧನರಾಗಿದ್ದಾರೆ.
ಸಾಗರ ತಾಲ್ಲೂಕು ಕಾನುಗೋಡು ಗ್ರಾಮದ ಶ್ರೀನಿವಾಸ್ ಜನತಾ ಪರಿವಾರದಲ್ಲಿ ಗುರುತಿಸಿಕೊಂಡು, ಆನಂತರ ಕಾಂಗ್ರೆಸ್‌ನಲ್ಲೂ ಇದ್ದವರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು.
ಕೃಷಿಕರಾಗಿ, ವಕೀಲರಾಗಿದ್ದುಕೊಂಡೇ ರಾಜಕೀಯ ಪ್ರವೇಶಿಸಿದ್ದರು. ಕೆಲವು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಹೈಕೋರ್ಟ್‌ನಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು.




























