Ad Widget .

ಮಂಗಳೂರು: ಕೃಷ್ಣಾಷ್ಟಮಿ ವೇಳೆ ಯುವತಿಯೊಂದಿಗೆ ಅಶ್ಲೀಲ ವರ್ತನೆ| ಯುವಕರ ತಂಡದಿಂದ ನಡೆಯಿತು ಕೃತ್ಯ

ಸಮಗ್ರ ನ್ಯೂಸ್: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ಯುವಕರ ಗುಂಪೊಂದು ಒಂಟಿ ಯುವತಿಯೊಂದಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಧಾರ್ಮಿಕ ಆಚರಣೆ ವೇಳೆ ಕೇಸರಿ ಶಾಲು ಹಾಕಿದ್ದ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ.

Ad Widget . Ad Widget .

ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ದಿನ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ, ನೃತ್ಯ, ಮೆರವಣಿಗೆ ಸಾಗಿ ಹಬ್ಬವನ್ನಾಚರಿಸುತ್ತಾರೆ. ಆದರೆ ಧಾರ್ಮಿಕ ಮೆರವಣಿಗೆಯಲ್ಲಿ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿ ಹುಚ್ಚಾಟ ಮೆರೆದಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ.

Ad Widget . Ad Widget .

ವೈರಲ್‌ ವಿಡಿಯೋದಲ್ಲಿ ಯುವಕರ ಗುಂಪಿನ ನಡುವೆ ಒಂಟಿ ಯುವತಿಯೊಬ್ಬಳು ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡಿದ್ದ ಯುವಕನೊಬ್ಬ ಆಕೆಯನ್ನು ತಬ್ಬಿಕೊಂಡು ಅಶ್ಲೀಲವಾಗಿ ವರ್ತಿಸಿದ್ದಾನೆ. ಈ ವೇಳೆ ಇರುಸುಮುರುಸುಗೊಂಡ ಯುವತಿ ಆತನನ್ನು ದೂರ ತಳ್ಳಿ ಅಲ್ಲಿಂದ ಬೇರೆಡೆ ಹೋಗಲು ಪ್ರಯತ್ನಿಸಿರುವುದು ಕಂಡುಬಂದಿದೆ.

ಈ ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ, ದಕ್ಷಿಣ ಕನ್ನಡದಲ್ಲಿ ಇದೆಂಥಾ ಸಂಸ್ಕೃತಿ? ಇದು ಯಾವ ರೀತಿಯ ಅಷ್ಟಮಿ ಆಚರಣೆ? ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *