August 2024

ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ| 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ

ಸಮಗ್ರ ನ್ಯೂಸ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್‌ ಸ್ಫೋಟಗೊಂಡು 14 ಮಂದಿ ಕಾರ್ಮಿಕರು ಸಾವನ್ನಪ್ಪಿ, ಸುಮಾರು 20 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಮಧ್ಯಾಹ್ನ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತ ವೀಡಿಯೋ […]

ಫಾರ್ಮಾ ಕಂಪನಿಯಲ್ಲಿ ರಿಯಾಕ್ಟರ್‌ ಸ್ಫೋಟ| 14 ಮಂದಿ ಕಾರ್ಮಿಕರು ಸಾವು, 20 ಮಂದಿಗೆ ಗಾಯ Read More »

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ವಿದೇಶ ಪ್ರವಾಸ| ಆ. 23 ರಂದು ರೈಲಿನಲ್ಲಿ ಉಕ್ರೇನ್ ಗೆ ಪ್ರಯಾಣ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದು, ಪೋಲೆಂಡ್ನಲ್ಲಿ ಲ್ಯಾಂಡ್ ಆಗಿದ್ದಾರೆ. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್ಗೆ ಭೇಟಿ ನೀಡಿದ್ದಾರೆ. ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಉಕ್ರೇನ್ಗೆ ಭೇಟಿ ನೀಡಲಿದ್ದಾರೆ. ರಷ್ಯಾ ಯುದ್ಧದ ಬಳಿಕ ಉಕ್ರೇನ್ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಪೋಲೆಂಡ್ನಿಂದ ಪ್ರಧಾನಿ ಮೋದಿ ಆ. 23 ರಂದು ಐಷಾರಾಮಿ ‘ಟ್ರೇನ್ ಫೋರ್ಸ್ ಒನ್’ನಲ್ಲಿ ಉಕ್ರೇನ್ಗೆ ಪ್ರಯಾಣಿಸಲಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ವಿದೇಶ ಪ್ರವಾಸ| ಆ. 23 ರಂದು ರೈಲಿನಲ್ಲಿ ಉಕ್ರೇನ್ ಗೆ ಪ್ರಯಾಣ Read More »

ಪುತ್ತೂರು: ವಿದ್ಯಾರ್ಥಿನಿಗೆ ಹಲ್ಲೆಗೈದ ಪ್ರಕರಣ| ಕಾನೂನು ಪ್ರಕಾರ ತನಿಖೆ ಎಂದ ಎಸ್ಪಿ

ಸಮಗ್ರ ನ್ಯೂಸ್: ಪುತ್ತೂರಿನ ಕೊಂಬೊಟ್ಟುವಿನಲ್ಲಿ ಬಾಲಕಿ ಮೇಲೆ ಬ್ಲೇಡ್ ನಿಂದ ಗಾಯಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಮಂಗಳವಾರ ಬೆಳಿಗ್ಗೆ ಸುಮಾರು 8.30 ಕ್ಕೆ ಈ ಘಟನೆ ನಡೆದಿದೆ. ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ಬಾಲಕಿ ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಬಾಲಕಿ ಕಾಲೇಜಿಗೆ ತೆರಳುವ

ಪುತ್ತೂರು: ವಿದ್ಯಾರ್ಥಿನಿಗೆ ಹಲ್ಲೆಗೈದ ಪ್ರಕರಣ| ಕಾನೂನು ಪ್ರಕಾರ ತನಿಖೆ ಎಂದ ಎಸ್ಪಿ Read More »

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕಗ್ಗೊಲೆ ಪ್ರಕರಣ| ದ.ಕ ಎಸ್ಪಿ ಯತೀಶ್ ಎನ್ ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ನಲ್ಲಿ ನಿವೃತ್ತ ಶಿಕ್ಷಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್. ಎನ್ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಮನೆ ಪಕ್ಕದಲ್ಲೇ ಶಿಕ್ಷಕನನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಕಗ್ಗೊಲೆ ಪ್ರಕರಣ| ದ.ಕ ಎಸ್ಪಿ ಯತೀಶ್ ಎನ್ ಹೇಳಿದ್ದಿಷ್ಟು… Read More »

ಮಂಗಳೂರು: ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ತಡರಾತ್ರಿ ಕಲ್ಲು ತೂರಾಟ‌

ಸಮಗ್ರ ನ್ಯೂಸ್: ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐವನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್

ಮಂಗಳೂರು: ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ತಡರಾತ್ರಿ ಕಲ್ಲು ತೂರಾಟ‌ Read More »

ಮದುವೆಗೆ ಒಪ್ಪದ ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಯುವತಿ

ಸಮಗ್ರ ನ್ಯೂಸ್: ಗೆಳೆಯ ಮದುವೆಗೆ ಒಪ್ಪಲಿಲ್ಲ ಎಂದು ಯುವತಿ ಆತನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿರುವ ಘಟನೆ ಆ. 16 ರಂದು ಮಹಾರಾಷ್ಟ್ರದ ಭಿವಂಡಿಯಲ್ಲಿ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಷ್ಟು ವರ್ಷಗಳ ಕಾಲ ಪ್ರೀತಿಸಿದ್ದ ಪ್ರಿಯಕರ ತನಗೆ ಸಿಗುವುದಿಲ್ಲ ಎಂದು ಕೋಪಗೊಂಡ ಯುವತಿ ಆತನ ಮೇಲೆ ಹಲ್ಲೆ ನಡೆಸಿದ್ದಾಳೆ. ಪದ್ಮಾ ನಗರ ಪ್ರದೇಶದ ತನ್ನ ಮನೆಯಲ್ಲಿ ಮಹಿಳೆ ತನ್ನ 31 ವರ್ಷದ ಗೆಳೆಯನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾಳೆ. ತನ್ನನ್ನು ಮದುವೆಯಾಗಲು ನಿರಾಕರಿಸಿದ ನಂತರ ಆಕೆ ವ್ಯಕ್ತಿಯ

ಮದುವೆಗೆ ಒಪ್ಪದ ಪ್ರಿಯಕರನ ಮರ್ಮಾಂಗಕ್ಕೆ ಚಾಕುವಿನಿಂದ ಇರಿದ ಯುವತಿ Read More »

‘ಅರೆಸ್ಟ್ ಮಾಡಲು ಸಿದ್ದರಾಮಯ್ಯ ಯಾಕೆ? ಒಬ್ಬ ಕಾನ್ಸ್ ಟೇಬಲ್ ಸಾಕು’| ಹೆಚ್.ಡಿ ಕೆ ಹೇಳಿಕೆಗೆ ಸಿಎಂ‌ ತಿರುಗೇಟು

ಸಮಗ್ರ ನ್ಯೂಸ್: ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡೋಕೆ ನೂರು ಸಿದ್ದರಾಮಯ್ಯ ಬೇಕಿಲ್ಲ ಒಬ್ಬ ಕಾನ್‌ಸ್ಟೇಬಲ್ ಸಾಕು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದರು. 100 ಸಿದ್ದರಾಮಯ್ಯ ಬಂದ್ರೂ ಏನು ಮಾಡೋಕಾಗಲ್ಲ ಎಂದಿದ್ದ ಹೆಚ್ಡಿಕೆ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಬಂಧನಕ್ಕೆ ಹೆದರಿ ಕುಮಾರಸ್ವಾಮಿ ಪ್ರೆಸ್‌ಮೀಟ್ ಮಾಡ್ತಿದ್ದಾರೆ. ಕುಮಾರಸ್ವಾಮಿದು ಬರೀ ಹಿಟ್ ಅಂಡ್ ರನ್. ದಾಖಲೆ ಬಿಡ್ತೀವಿ ಬಿಡ್ತೀವಿ ಅಂತಾರೆ ಯಾವ ದಾಖಲೆನೂ ಇಲ್ಲ. ಇದುವರೆಗೆ ಯಾವ ಪ್ರಕರಣವನ್ನು

‘ಅರೆಸ್ಟ್ ಮಾಡಲು ಸಿದ್ದರಾಮಯ್ಯ ಯಾಕೆ? ಒಬ್ಬ ಕಾನ್ಸ್ ಟೇಬಲ್ ಸಾಕು’| ಹೆಚ್.ಡಿ ಕೆ ಹೇಳಿಕೆಗೆ ಸಿಎಂ‌ ತಿರುಗೇಟು Read More »

ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ 2022-23ನೇ (NEP ವಿದ್ಯಾರ್ಥಿಗಳು) ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ನೀಡಬೇಕಾಗಿ ಪತ್ರಿಕಾಗೋಷ್ಠಿ ನಡೆಸಿದರು. ಈ ವಿಚಾರವಾಗಿ ಉಪ ಕುಲಪತಿಗಳನ್ನು ಕೇಳಿದಾಗ, ಪ್ರಸ್ತುತ ಭೌತಿಕ ಅಂಕಪಟ್ಟಿ ಗಳನ್ನು ನೀಡದಿರುವಂತೆ ಸರಕಾರದ ಆದೇಶವಿರುವುದಾಗಿಯೂ, ಈ ವಿಚಾರದಲ್ಲಿ ಬದಲಾವಣೆ ತರಲು ಸರ್ಕಾರಕ್ಕೆ ಮಾತ್ರ ಸಾಧ್ಯವಿರುದಾಗಿಯೂ ಅವರು ತಿಳಿಸಿದ್ದು, ಆದರೆ ಈಗಾಗಲೇ ಸೆಮಿಸ್ಟರ್ ಒಂದಕ್ಕೆ ₹230ರಂತೆ ಅಂಕಪಟ್ಟಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳು

ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ Read More »

ಪ್ರಾಸಿಕ್ಯೂಷನ್ಗೆ ಅನುಮತಿ: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು..!

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ವಾಹನದಲ್ಲಿ ಗುಪ್ತಚರ ಇಲಾಖೆಯ ಸಲಹೆ ಮೇರೆಗೆ ಇದೀಗ ಬದಲಾವಣೆ ಮಾಡಲಾಗಿದೆ. ಇದುವರೆಗೆ ಸಾಮಾನ್ಯ ಕಾರು ಬಳಸುತ್ತಿದ್ದ ರಾಜ್ಯಪಾಲರು ಇನ್ನು ಮುಂದೆ ಬುಲೆಟ್‌ ಪ್ರೂಫ್‌ ಕಾರು ಬಳಸಲಿದ್ದಾರೆ. ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಎಲ್ಲೆಡೆ ಕಾಂಗ್ರೆಸ್‌ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ರಾಜಭವನಕ್ಕೆ ನುಗ್ಗಲೂ ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. ಇನ್ನು, ರಾಜ್ಯದ ಹಲವೆಡೆ

ಪ್ರಾಸಿಕ್ಯೂಷನ್ಗೆ ಅನುಮತಿ: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು..! Read More »

ಪಾವಗಡ: ಬೀಗರೂಟ ಮಾಡಿದ್ದ 24 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬೀಗರೂಟ ಮಾಡಿದ್ದ ನಂತರ ವಾಂತಿ, ಬೇಧಿ ಕಾಣಿಸಿಕೊಂಡು ಸುಮಾರು 24 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತುಮಕೂರು ಜಿಲ್ಲೆಯ ಪಾವಗಡದ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿದೆ. ಅಲ್ಲದೇ ಅಗಸ್ಟ್ 16 ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರೂಟ ನಡೆದಿತ್ತು. ಬೀಗರು ಊಟ ಮಾಡಿ ಮನೆಗೆ ತೆರಳಿದ ವೇಳೆಯಲ್ಲಿ ಹಲವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡವರನ್ನು ಪಾವಗಡ, ಬೆಂಗಳೂರು, ಹಿಂದೂಪುರದ ಆಸ್ಪತ್ರೆಗೆ

ಪಾವಗಡ: ಬೀಗರೂಟ ಮಾಡಿದ್ದ 24 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »