August 2024

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಇಂದು ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಲಿದೆ. ಕಳೆದ ವಾರ ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014 ರಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು […]

ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಚುನಾವಣೆ/ ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ Read More »

ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ|

ಸಮಗ್ರ ನ್ಯೂಸ್: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಗಾಯಗೊಂಡ ಘಟನೆ ಇಂದು (ಆ.20) ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಗಾಯಗೊಂಡ ಧನುಷ್(30) ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಕಾಡು ಹಂದಿ ದಾಳಿ ನಡೆಸಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು

ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ| Read More »

ದೇಶದಲ್ಲಿ ಮಂಕಿಪಾಕ್ಸ್ ಭೀತಿ/ ಎಚ್ಚರವಹಿಸಲು ಕೇಂದ್ರ ಆರೋಗ್ಯ ಇಲಾಖೆ ಸೂಚನೆ

ಸಮಗ್ರ ನ್ಯೂಸ್‌: ದೇಶದಲ್ಲಿ ಮಂಕಿಪಾಕ್ಸ್ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ, ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಭೂ ಬಂದರುಗಳಲ್ಲಿನ ಅಧಿಕಾರಿಗಳಿಗೆ ಒಳಬರುವ ಪ್ರಯಾಣಿಕರ ಬಗ್ಗೆ ಎಚ್ಚರದಿಂದಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಆರೋಗ್ಯ ಸಚಿವಾಲಯವು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ, ಸಫರ್‌ಜಂಗ್ ಆಸ್ಪತ್ರೆ ಮತ್ತು ಲೇಡಿ ಹಾರ್ಡಿಂಜ್ ಆಸ್ಪತ್ರೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ಮಂಕಿಪಾಕ್ಸ್ ರೋಗಿಯ ಪ್ರತ್ಯೇಕತೆ, ನಿರ್ವಹಣೆ ಮತ್ತು ಚಿಕಿತ್ಸೆಗಾಗಿ ನೋಡಲ್ ಕೇಂದ್ರಗಳಾಗಿ ಗುರುತಿಸಿದೆ. ಅಂತಹ ಗೊತ್ತುಪಡಿಸಿದ

ದೇಶದಲ್ಲಿ ಮಂಕಿಪಾಕ್ಸ್ ಭೀತಿ/ ಎಚ್ಚರವಹಿಸಲು ಕೇಂದ್ರ ಆರೋಗ್ಯ ಇಲಾಖೆ ಸೂಚನೆ Read More »

ಮುಡಾ ಭೂ ಹಗರಣ| ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ತಕ್ಷಣ ಯಾವುದೇ ಕ್ರಮಕೈಗೊಳ್ಳದಂತೆ ವಿಚಾರಣಾ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್‌ ಇಂದು ಆದೇಶಿಸಿದೆ. ಮುಂದಿನ ವಿಚಾರಣೆ ನಡೆಯುವ ಆಗಸ್ಟ್‌ 29ರ ತನಕ ಈ ಮಧ್ಯಂತರ ತೀರ್ಪು ಜಾರಿಯಲ್ಲಿರಲಿದೆ. ರಾಜ್ಯಪಾಲರ ಕ್ರಮ ಕಾನೂನುಬಾಹಿರ ಹಾಗೂ ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದು ತಮ್ಮ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ. ಅಲ್ಲದೇ

ಮುಡಾ ಭೂ ಹಗರಣ| ಸಿಎಂ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ನೀಡಿದ ಹೈಕೋರ್ಟ್ Read More »

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಲ್ಲಿ ವಿದ್ಯಾರ್ಥಿಯ ಕಿಡ್ನಾಪ್

ಸಮಗ್ರ ನ್ಯೂಸ್: ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರು ಹೇಳಿಕೊಂಡು ದುಷ್ಕರ್ಮಿಗಳು ವಿದ್ಯಾರ್ಥಿಯೊಬ್ಬನನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಪಹರಣವಾದ ವಿದ್ಯಾರ್ಥಿ ಜೀವನ್ ಜೈನ್ ಅಪಹರಣ ಮಾಡಿದ ನಾಲ್ವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್, ಕಳೆದ ವರ್ಷ ಆಯುಷ್ಶ್ರೀನಿವಾಸ್ ಎಂಬಾತನಿಂದ ಮೂರು

ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೆಸರಲ್ಲಿ ವಿದ್ಯಾರ್ಥಿಯ ಕಿಡ್ನಾಪ್ Read More »

ಉಪ್ಪಿನಂಗಡಿ: ಜಾರ್ಖಂಡ್ ಮೂಲದ ಬಾಲಕಿ ನೇಣು‌ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕರಾಯ ಗ್ರಾಮದ ಕೊಂಬೆಟ್ಟಿಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಕುಟುಂಬವೊಂದರ 14 ರ ಹರೆಯದ ಬಾಲಕಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆ.18ರ ರಾತ್ರಿ ಸಂಭವಿಸಿದೆ. ಮೂಲತಃ ಜಾಖಂಡ್ ರಾಜ್ಯದ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್ಪಾ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ತನ್ನ ಪತ್ನಿ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಒರ್ವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ಬಾಲಕಿ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುತ್ತಾಳೆ ಎಂದು

ಉಪ್ಪಿನಂಗಡಿ: ಜಾರ್ಖಂಡ್ ಮೂಲದ ಬಾಲಕಿ ನೇಣು‌ಬಿಗಿದು ಆತ್ಮಹತ್ಯೆ Read More »

ಸಕಲೇಶಪುರ: ರೈಲು ಹಳಿಗಳ ಮೇಲೆ‌ ಕುಸಿದ ಮಣ್ಣು ತೆರವು| ಇಂದಿನಿಂದ (ಆ.20) ರೈಲು ಸಂಚಾರ ಪುನರಾರಂಭ

ಸಮಗ್ರ ನ್ಯೂಸ್: ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆಯೇ ಮಳೆಯಿಂದಾಗಿ ಭೂಕುಸಿತಗೊಂಡು ಕುಸಿದಿದ್ದ ಮಣ್ಣನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದ್ದು, ಇಂದಿನಿಂದ (ಆ.20) ಈ ಮಾರ್ಗದಲ್ಲಿ ಕೆಲ ರೈಲುಗಳ ಸಂಚಾರ ಪುನರಾರಂಭವಾಗಲಿದೆ‌. ರೈಲು ಸಂಚಾರದ ಬಗ್ಗೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಪುನಃಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಸದ್ಯ ಹಳಿಯಲ್ಲಿನ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲಾಗಿದೆ ಮತ್ತು ಸಂಜೆ 4:45 ರವರೆಗೆ ಹಳಿಯ ಎಲ್ಲಾ ರೈಲು ಕಾರ್ಯಾಚರಣೆಗಳನ್ನು

ಸಕಲೇಶಪುರ: ರೈಲು ಹಳಿಗಳ ಮೇಲೆ‌ ಕುಸಿದ ಮಣ್ಣು ತೆರವು| ಇಂದಿನಿಂದ (ಆ.20) ರೈಲು ಸಂಚಾರ ಪುನರಾರಂಭ Read More »

ಮಂಗಳೂರು: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾರ್ಯಕರ್ತರ ಪುಂಡಾಟ| ಬಸ್ ಗೆ ಕಲ್ಲು ತೂರಿದ ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲು ಹೊಡೆದ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಾಹುಲ್ ಹಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ‌ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು

ಮಂಗಳೂರು: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾರ್ಯಕರ್ತರ ಪುಂಡಾಟ| ಬಸ್ ಗೆ ಕಲ್ಲು ತೂರಿದ ಮೂವರು ಅರೆಸ್ಟ್ Read More »

ದಶಕದ ಬಳಿಕ‌ ರಬ್ಬರ್ ದರದಲ್ಲಿ ಚೇತರಿಕೆ| ಕರಾವಳಿಯ ರಬ್ಬರ್ ಬೆಳೆಗಾರರ ಮುಖದಲ್ಲಿ ಮಂದಹಾಸ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಬ್ಬರ್​ ದರ ಏರಿಕೆಯಾಗಿದ್ದು, ಬೆಳೆಗಾರರ ​​ಮುಖದಲ್ಲಿ ಮಂದಹಾಸ ಮೂಡಿದೆ. ಬರೋಬ್ಬರಿ 13 ವರ್ಷಗಳ ನಂತರ ರಬ್ಬರ್ ಬೆಲೆ ಏರಿಕೆಯಾಗಿದೆ. ಅಂದರೆ 2011ರಲ್ಲಿ ರಬ್ಬರ್​ ಬೆಲೆ ಕೆಜಿಗೆ 242ರೂ. ಈ ಬಳಿಕ ರಬ್ಬರ್​ ಬೆಲೆ ಕಳೆದ ವರ್ಷ ರಬ್ಬರ್​ ಬೆಲೆ ಕೆಜಿಗೆ 149 ರೂ.ಗೆ ಇಳಿಕೆಯಾಗಿತ್ತು. ಈ ವರ್ಷ ರಬ್ಬರ್ (ಆರ್‌ಎಸ್‌ಎಸ್ 4 ಗ್ರೇಡ್) ಕೆಜಿಗೆ 239 ರೂ., ಆರ್‌ಎಸ್‌ಎಸ್ 5 ಗ್ರೇಡ್ ಕೆಜಿಗೆ 234 ರೂ. ಮತ್ತು ಲ್ಯಾಟೆಕ್ಸ್ ಬೆಲೆಯು ಕೆಜಿಗೆ

ದಶಕದ ಬಳಿಕ‌ ರಬ್ಬರ್ ದರದಲ್ಲಿ ಚೇತರಿಕೆ| ಕರಾವಳಿಯ ರಬ್ಬರ್ ಬೆಳೆಗಾರರ ಮುಖದಲ್ಲಿ ಮಂದಹಾಸ Read More »

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ/ ರಾಜ್ಯಾದ್ಯಂತ ಹೈ ಆಲರ್ಟ್‌

ಸಮಗ್ರ ನ್ಯೂಸ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದ್ದು ಈ ಹಿನ್ನೆಲೆಯಲ್ಲಿ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಂಘಟನೆಗಳು, ಸಿದ್ದರಾಮಯ್ಯ ಅಭಿಮಾನಿಗಳ ಸಂಘಗಳು ಇಂದು ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು,

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ/ ರಾಜ್ಯಾದ್ಯಂತ ಹೈ ಆಲರ್ಟ್‌ Read More »