August 2024

ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಭೀತಿ| ಮುನ್ನೆಚ್ಚರಿಕಾ ಕ್ರಮವಾಗಿ ಸೂಚನಾ ಫಲಕ ಅಳವಡಿಕೆ

ಸಮಗ್ರ ನ್ಯೂಸ್: ಹಾಸನದಲ್ಲಿ ಕಳೆದ 4 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಮಣ್ಣು ಕುಸಿಯುತ್ತಿರುವ ಕಡೆ ಸೂಚನಾ ಫಲಕ ಅಳವಡಿಸುವ ಮೂಲಕ ತಾಲೂಕು ಆಡಳಿತ, ಹೆದ್ದಾರಿ ಪ್ರಾಧಿಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಭೂಕುಸಿತ ಭೀತಿ ಹಿನ್ನಲೆ ಪ್ರತಿನಿತ್ಯ ಆತಂಕದಲ್ಲೇ ವಾಹನ ಸವಾರರು ಸಂಚಾರ ಮಾಡುವಂತಾಗಿದೆ. ಜುಲೈ ತಿಂಗಳಲ್ಲಿ ಸುರಿದ ಮಳೆಯಿಂದ ದೊಡ್ಡತಪ್ಲು ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್ ಆಗಿತ್ತು. […]

ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತ ಭೀತಿ| ಮುನ್ನೆಚ್ಚರಿಕಾ ಕ್ರಮವಾಗಿ ಸೂಚನಾ ಫಲಕ ಅಳವಡಿಕೆ Read More »

ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಸಂಪೂರ್ಣ ಅನುಷ್ಠಾನ ಸಾಧ್ಯವಿಲ್ಲ – ಸಚಿವ ಖಂಡ್ರೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬುಧವಾರ (ಆ.20) ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರವು ಈಗಾಗಲೇ 16,632 ಚದರ ಕಿ.ಮೀ. ಪ್ರದೇಶವನ್ನು ಅಭಯಾರಣ್ಯಗಳು, ರಾಷ್ಟ್ರೀಯ ಉದ್ಯಾನವನಗಳು ಮತ್ತು ಪರಿಸರ ಸೂಕ್ಷ್ಮ ವಲಯಗಳನ್ನಾಗಿ ಘೋಷಣೆ ಮಾಡಿದೆ. ಉಳಿದ ಪ್ರದೇಶದಲ್ಲಿ 1,533

ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಸಂಪೂರ್ಣ ಅನುಷ್ಠಾನ ಸಾಧ್ಯವಿಲ್ಲ – ಸಚಿವ ಖಂಡ್ರೆ Read More »

ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌. ಶ್ರೀನಿವಾಸ್‌ ಇನ್ನಿಲ್ಲ

ಸಮಗ್ರ ನ್ಯೂಸ್: ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌. ಶ್ರೀನಿವಾಸ್‌ ಅವರು ಇಂದು (ಆ.30)ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದ ಶ್ರೀನಿವಾಸ್‌ ಜನತಾ ಪರಿವಾರದಲ್ಲಿ ಗುರುತಿಸಿಕೊಂಡು, ಆನಂತರ ಕಾಂಗ್ರೆಸ್‌ನಲ್ಲೂ ಇದ್ದವರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು. ಕೃಷಿಕರಾಗಿ, ವಕೀಲರಾಗಿದ್ದುಕೊಂಡೇ ರಾಜಕೀಯ ಪ್ರವೇಶಿಸಿದ್ದರು. ಕೆಲವು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ

ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌. ಶ್ರೀನಿವಾಸ್‌ ಇನ್ನಿಲ್ಲ Read More »

ಓಮಾನ್ ನಲ್ಲಿ ಭೀಕರ ಅಪಘಾತ| ಬೆಳಗಾವಿಯ ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ಓಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ. ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದ್ದು ಘಟನೆಯಲ್ಲಿ ಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುಟುಂಬ ದುಬೈನ ಓಮಾನ್ಗೆ ಪ್ರವಾಸಕ್ಕೆ ತೆರಳಿತ್ತು. ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ

ಓಮಾನ್ ನಲ್ಲಿ ಭೀಕರ ಅಪಘಾತ| ಬೆಳಗಾವಿಯ ನಾಲ್ವರು ದುರ್ಮರಣ Read More »

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಸೌಜನ್ಯ ಪೋಷಕರು ಸಲ್ಲಿಸಿದ ಮೂರೂ ಅರ್ಜಿಗಳು ವಜಾ

ಸಮಗ್ರ ನ್ಯೂಸ್: ಧರ್ಮಸ್ಥಳದ ಪಾಂಗಾಳ ಸಮೀಪ ಹನ್ನೆರಡು ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಆದೇಶ ಹೊರಬಿದ್ದಿದೆ. ಪ್ರಕರಣದ ಮರುತನಿಖೆ ನಡೆಸುವಂತೆ ಸೌಜನ್ಯ ಪೋಷಕರು ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿ ಆದೇಶೀಸಿತ್ತು. ಇಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಬಿದ್ದಿದ್ದು, ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರಿದ್ದ ಪೀಠವು ಮರುತನಿಖೆ ಅರ್ಜಿಗಳನ್ನು ವಜಾಗೊಳಿಸಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಸೌಜನ್ಯ ಪೋಷಕರು ಸಲ್ಲಿಸಿದ ಮೂರೂ ಅರ್ಜಿಗಳು ವಜಾ Read More »

ಬೇಕರಿಯ ತಿನಿಸುಗಳ ಮೇಲೆ ನಿರ್ಬಂಧ ತರಲು ಇಲಾಖೆ ಸಿದ್ಧತೆ| ಬ್ಯಾನ್ ಆಗುತ್ತಾ ಕೇಕ್ !?

ಸಮಗ್ರ ನ್ಯೂಸ್:ಆರೋಗ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆ ಜನರ ಹಿತದೃಷ್ಟಿ ಕಾಪಾಡುವ ಸಲುವಾಗಿ, ಅನೇಕ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ‌ಜನರು ಸೇವಿಸುವ ಆಹಾರ ದಿನದಿಂದ ದಿನಕ್ಕೆ ಕಲುಷಿತವಾಗುತ್ತಿದ್ದು, ಕಲಬೆರಕೆ ಆಹಾರದ ವಿರುದ್ಧ ಸಮರ ಸಾರಿದೆ. ಬೇಕರಿಯ ತಿನಿಸುಗಳ ಮೇಲೆ ನಿರ್ಬಂಧ ತರಲು ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.‌ ಇದಕ್ಕೆ ಪೂರಕವಾಗಿ ಮೊದಲಿಗೆ ಸಾಮಾನ್ಯವಾಗಿ ಜನರು ಹೆಚ್ಚು ಸೇವನೆ ಮಾಡುವ ಕೇಕ್‌ಗಳ ಮೇಲೆ ನಿಗಾ ವಹಿಸಲಾಗುತ್ತಿದೆ.‌ ಕೇಕ್‌ಗೆ ಬಳಸುವ ಮೈದಾಹಿಟ್ಟು, ಕೋಕೋ ಪೌಡರ್, ಕ್ರೀಮ್‌ಗಳಿಗೆ ಬಳಸುವ ಪದಾರ್ಥಗಳು, ಫ್ಲೇವರ್‌ಗಳು ಹಾಗೂ

ಬೇಕರಿಯ ತಿನಿಸುಗಳ ಮೇಲೆ ನಿರ್ಬಂಧ ತರಲು ಇಲಾಖೆ ಸಿದ್ಧತೆ| ಬ್ಯಾನ್ ಆಗುತ್ತಾ ಕೇಕ್ !? Read More »

ಕೇಂದ್ರ ಸರ್ಕಾರದಿಂದ ದ. ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 10.32 ಕೋಟಿ ರೂ. ಅನುದಾನ ಬಿಡುಗಡೆ; ಕ್ಯಾ. ಬ್ರಿಜೇಶ್ ಚೌಟ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಜನ್ ಮನ್ (ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದ. ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಬುಡಕಟ್ಟು ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ಈ ಪಿಎಂ ಜನ್ ಮನ್ ಯೋಜನೆಯಡಿ 2024-25ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು

ಕೇಂದ್ರ ಸರ್ಕಾರದಿಂದ ದ. ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 10.32 ಕೋಟಿ ರೂ. ಅನುದಾನ ಬಿಡುಗಡೆ; ಕ್ಯಾ. ಬ್ರಿಜೇಶ್ ಚೌಟ Read More »

ಗ್ರಾಹಕನಿಗೆ ಕಣ್ಣೀರು ತರಲು ಸಿದ್ದವಾದ ಈರುಳ್ಳಿ| ಬೆಳ್ಳುಳ್ಳಿ ದರದಲ್ಲೂ ಭಾರಿ ಏರಿಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತ ಕಂಡಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರದೇ ಇರುವುದು ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳುವುದರಿಂದ ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ. ಹಬ್ಬದ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯಾತೆ ಇದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ

ಗ್ರಾಹಕನಿಗೆ ಕಣ್ಣೀರು ತರಲು ಸಿದ್ದವಾದ ಈರುಳ್ಳಿ| ಬೆಳ್ಳುಳ್ಳಿ ದರದಲ್ಲೂ ಭಾರಿ ಏರಿಕೆ Read More »

‘ಗೃಹಲಕ್ಷ್ಮಿ’ ಯೋಜನೆಗೆ ವರ್ಷದ ಹರ್ಷ| ಇದುವರೆಗೂ ಮಹಿಳೆಯರ ಖಾತೆ ಸೇರಿದ ಮೊತ್ತ ಎಷ್ಟು ಗೊತ್ತಾ?

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. ಜಮಾ ಮಾಡಲಾಗಿದೆ. 2023ರ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ್ ರಾಹುಲ್ ಗಾಂಧಿ ಯೋಜನೆಗೆ ಚಾಲನೆ ನೀಡಿದ್ದರು. ಬಜೆಟ್ ನಲ್ಲಿ 28,608 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಯೋಜನೆಗೆ ಹಣಕಾಸು ಮುಗ್ಗಟ್ಟು ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 9.83 ಲಕ್ಷ ಫಲಾನುಭವಿಗಳಿದ್ದು,

‘ಗೃಹಲಕ್ಷ್ಮಿ’ ಯೋಜನೆಗೆ ವರ್ಷದ ಹರ್ಷ| ಇದುವರೆಗೂ ಮಹಿಳೆಯರ ಖಾತೆ ಸೇರಿದ ಮೊತ್ತ ಎಷ್ಟು ಗೊತ್ತಾ? Read More »

ಪುತ್ತೂರು: ಆಡಿಯೋ ವೈರಲ್ ಬೆನ್ನಲ್ಲೇ ಮಹಿಳೆಗೆ ಬೆದರಿಕೆ ಕರೆ; ದೂರು ದಾಖಲು

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಮಹಿಳೆಯದ್ದು ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಮಹಿಳೆ ನಿನ್ನೆ ರಾತ್ರಿ (ಆ.29) ಆರೋಪಿಸಿ ದೂರು ನೀಡಲು ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿರುವ ಬಗ್ಗೆ ತಿಳಿದುಬಂದಿದೆ. ಆಡಿಯೋ ವೈರಲ್ ಬಳಿಕ ಮಹಿಳೆಗೆ ಹಲವಾರು ಬೆದರಿಕೆ ಕರೆಗಳು ಬಂದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದು ಪೊಲೀಸ್ ಇನ್ಸ್ಪೆಕ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ತಡರಾತ್ರಿ

ಪುತ್ತೂರು: ಆಡಿಯೋ ವೈರಲ್ ಬೆನ್ನಲ್ಲೇ ಮಹಿಳೆಗೆ ಬೆದರಿಕೆ ಕರೆ; ದೂರು ದಾಖಲು Read More »