ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್
ಸಮಗ್ರ ನ್ಯೂಸ್: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ರಾ.ಹೆ.66ರ ಪಕ್ಕದಲ್ಲಿರುವ ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ಮಧ್ಯರಾತ್ರಿ ವೇಳೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. […]