August 2024

ಸಂಪಾಜೆ: ಡಿವೈಡರ್ ಗೆ ಗುದ್ದಿ ಬೈಕ್ ಪಲ್ಟಿಯಾಗಿರುವ ಶಂಕೆ| ಬೈಕ್ ಸವಾರರಿಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯನಾಡು ಎಂಬಲ್ಲಿ ಬೈಕ್ ಭೀಕರವಾಗಿ ಅಪಘಾತಗೊಂಡಿದ್ದು, ದುರ್ಘಟನೆಯಲ್ಲಿ ಬೈಕ್ ಸವಾರ‌ರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಘಟನೆ ನಡೆದಿದೆ ಎಂದು ಶಂಕಿಸಲಾಗಿದ್ದು, ಇಂದು (ಜೂ.5) ಮುಂಜಾನೆ ಸ್ಥಳೀಯರ ಗಮನಕ್ಕೆ ಬಂದಿದೆ. ರಾಯಲ್ ಎನ್ ಫೀಲ್ಡ್ ಬೈಕ್ ಮತ್ತು ಇಬ್ಬರ ಮೃತ ದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ರಾತ್ರಿ ವೇಗದಿಂದ ಬಂದು ಬೈಕ್ ಡಿವೈಡರ್ ಗೆ ಗುದ್ದಿರಬಹುದು ಎಂದು ಶಂಕಿಸಲಾಗಿದೆ.

ಸಂಪಾಜೆ: ಡಿವೈಡರ್ ಗೆ ಗುದ್ದಿ ಬೈಕ್ ಪಲ್ಟಿಯಾಗಿರುವ ಶಂಕೆ| ಬೈಕ್ ಸವಾರರಿಬ್ಬರು ದುರ್ಮರಣ Read More »

ಕರಾವಳಿಯಲ್ಲಿ ಆಟಿ‌ ಅಮಾವಾಸ್ಯೆ ಸಂಭ್ರಮ| ಪುಣ್ಯ‌ ಸ್ನಾನಗೈದು ಪುಳಕಿತರಾದ ಭಕ್ತರು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಎರಡು ಪ್ರಸಿದ್ಧ ಪರ್ವತ ಪುಣ್ಯ ಕ್ಷೇತ್ರಗಳಾದ ಕಾರಿಂಜ ಕಾರಿಂಜೇಶ್ವರ ಸನ್ನಿಧಿ ಹಾಗೂ ನರಹರಿ ಸದಾಶಿವ ರುದ್ರ ಸನ್ನಿಧಿಯಲ್ಲಿ ಇಂದು (ಆಗಸ್ಟ್ 4) ನಸುಕಿನ ಜಾವ ಭಕ್ತರ ಗಡಣವಿತ್ತು. ವೈದಿಕರು ವೇದಮಂತ್ರಗಳ ಪಠಣವನ್ನು ಮಾಡುತ್ತಿದ್ದರೆ, ಭಕ್ತರು, ತೀರ್ಥಸ್ನಾನ ಮಾಡಿ ಪುನೀತರಾದರು. ಆಟಿಯ ಅಮಾವಾಸ್ಯೆ ಅಥವಾ ಆಟಿ ಅಮಾಸೆ ಎಂಬುದು ದಕ್ಷಿಣ ಕನ್ನಡ ಜಿಲ್ಲೆಯನ್ನು ಒಳಗೊಂಡಿರುವ ತುಳುನಾಡಿನ ಆಚರಣೆ ಈ ಅಮಾವಾಸ್ಯೆ ಆಷಾಡ ಅಮಾವಾಸ್ಯೆ. ಆಟಿ ತಿಂಗಳಿನ ಅಮಾವಾಸ್ಯೆಯ ದಿನ ಕರಾವಳಿಯ ನಾನಾ

ಕರಾವಳಿಯಲ್ಲಿ ಆಟಿ‌ ಅಮಾವಾಸ್ಯೆ ಸಂಭ್ರಮ| ಪುಣ್ಯ‌ ಸ್ನಾನಗೈದು ಪುಳಕಿತರಾದ ಭಕ್ತರು Read More »

ದುರಂತ ಸಂಭವಿಸಿದ ವಯನಾಡಿನಲ್ಲಿ ಈಗ ಕಳ್ಳರ ಹಾವಳಿ| ಸಂತ್ರಸ್ತರ ನಗ -ನಗದು ದೋಚುತ್ತಿರುವ ಕಳ್ಳರು

ಸಮಗ್ರ ನ್ಯೂಸ್: ಭಾರೀ ದುರಂತದಿಂದ ನಲುಗಿ ಹೋಗಿರುವ ಕೇರಳದ ವಯನಾಡಿನಲ್ಲಿ ಇದೀಗ ಕಳ್ಳರ ಹಾವಳಿ ಆರಂಭವಾಗಿದೆ ಎಂದು ತಿಳಿದುಬಂದಿದೆ. ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಸಂತ್ರಸ್ಥರು ಅಳಲು ತೋಡಿಕೊಂಡಿದ್ದಾರೆ. ಭೂಕುಸಿತದ ಸಂದರ್ಭದಲ್ಲಿ ಪ್ರಾಣ ರಕ್ಷಣೆಗಾಗಿ ಮನೆಗಳನ್ನು ತೊರೆದು ರೆಸಾರ್ಟ್‌ನಲ್ಲಿ ತಂಗಿದ್ದೇವೆ. ಆದರೆ ಪರಿಸ್ಥಿತಿ ಅವಲೋಕನಕ್ಕಾಗಿ ಮನೆಯ ಬಳಿ ತೆರಳಿದ್ದಾಗ ಬಾಗಿಲುಗಳು ಮುರಿದುಕೊಂಡಿತ್ತು, ಬಟ್ಟೆಗಳು ಹಾಗೂ ಕೆಲವು ವಸ್ತುಗಳು ನಾಪತ್ತೆಯಾಗಿವೆ ಎಂದು ಸಂತ್ರಸ್ತರೊಬ್ಬರು ಹೇಳಿದ್ದು ವರದಿಯಾಗಿದೆ. ರಾತ್ರಿ ವೇಳೆ ಕಳ್ಳತನ ಮಾಡುವ ಉದ್ದೇಶದಿಂದ ಈ

ದುರಂತ ಸಂಭವಿಸಿದ ವಯನಾಡಿನಲ್ಲಿ ಈಗ ಕಳ್ಳರ ಹಾವಳಿ| ಸಂತ್ರಸ್ತರ ನಗ -ನಗದು ದೋಚುತ್ತಿರುವ ಕಳ್ಳರು Read More »

ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಕಡಿದು ನರ್ತಿಸಿದ ಪತಿ| ವಿಕೃತಿ ಮೆರೆದಾತನ ಬಂಧಿಸಲು ಅಶ್ರುವಾಯು ಸಿಡಿಸಿದ ಪೊಲೀಸರು

ಸಮಗ್ರ ನ್ಯೂಸ್: ಪತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಕುತ್ತಿಗೆಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿ ವಿಚಿತ್ರವಾಗಿ ವರ್ತಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಸದ್ಯ ಗಂಭೀರ ಗಾಯಗೊಂಡಿರುವ ಪತ್ನಿಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದವರನ್ನು ಅನಿತಾ (38) ಎಂದು ಗುರುತಿಸಲಾಗಿದೆ. ಅವರ ಪತಿ, ಆರೋಪಿ ಲಕ್ಷ್ಮಣ ಯಾನೆ ರಮೇಶ್‌ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೊರಬ ತಾಲೂಕು ಮೂಲದ ಲಕ್ಷ್ಮಣ ಮತ್ತು ಅನಿತಾ ದಂಪತಿ ನಾಲ್ಕು ತಿಂಗಳ

ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಕಡಿದು ನರ್ತಿಸಿದ ಪತಿ| ವಿಕೃತಿ ಮೆರೆದಾತನ ಬಂಧಿಸಲು ಅಶ್ರುವಾಯು ಸಿಡಿಸಿದ ಪೊಲೀಸರು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಆಗಸ್ಟ್ 04ರಿಂದ ಆಗಸ್ಟ್​ 10 ರವರೆಗಿನ ರಾಶಿ ಫಲ ವಿವರ ಇಲ್ಲಿದೆ. ಈ ವಾರ ಯಾವೆಲ್ಲ ರಾಶಿಗೆ ಶುಭಫಲ? ಯಾವ ರಾಶಿಗೆ ಅಶುಭ? ಎಂದು ಈ ವಾರ ಭವಿಷ್ಯದಲ್ಲಿ ತಿಳಿಯಿರಿ. ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಯಾವ ರಾಶಿಗೆ ಮಿಶ್ರ ಫಲವಿರಲಿದೆ ತಿಳಿಯೋಣ… ಮೇಷ ರಾಶಿ:ರಾಶಿ ಚಕ್ರದ ಮೊದಲ ರಾಶಿಯೂ ಆಗಿದ್ದು, ಈ ರಾಶಿಯವರಿಗೆ ಶುಭ ಫಲವು ಆಧಿಕವಾಗಿ ಇರುವುದು. ಗುರುವು ದ್ವಿತೀಯದಲ್ಲಿ ಜೊತೆಗೆ ಕುಜನೂ ಇರುವನು. ಮಾತಿನ ಮೇಲೆ ಹಿಡಿತ ಕಷ್ಟವಾಗಿ, ಬೇಸರವನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸುಳ್ಯ: ಅರ್ಹತಾ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ ಪಾರಮ್ಯ| ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ(CTET)ಹಾಗೂ ವಿಶ್ವವಿದ್ಯಾನಿಲಯದ ಸಾಮಾನ್ಯ ಪ್ರವೇಶ ಪರೀಕ್ಷೆ(CUET)ಯಲ್ಲಿ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

ಸಮಗ್ರ ನ್ಯೂಸ್: ಗ್ರಾಮೀಣ ಪ್ರದೇಶದ ಯುವ ಜನತೆಗೆ ಆಶಾಕಿರಣವಾಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಖ್ಯಾತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿವಿಧ ಅರ್ಹತಾ ಪರೀಕ್ಷೆಗಳಿಗೆ ತರಬೇತಿ ಪಡೆದ 2 ವಿದ್ಯಾರ್ಥಿಗಳಲ್ಲಿ ಇಬ್ಬರೂ ಕೂಡ ಉತ್ತೀರ್ಣರಾಗುವ ಮೂಲಕ ಹೊಸ ಮೈಲುಗಲ್ಲನ್ನು ಸ್ಥಾಪಿಸಿದೆ. ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ-CTET2024 ವರ್ಷ ಮೊಳೆಯರ್ ಸಾಧನೆ:ವಿವಿಧ ಅರ್ಹತಾ ಪರೀಕ್ಷೆಗಳಿಗೆ ಸಂಬಂದಿಸಿದಂತೆ ವಿದ್ಯಾಮಾತಾ ಅಕಾಡೆಮಿಯು ನೀಡಿದ್ದ ತರಗತಿಗಳಿಗೆ ಹಾಜರಾಗಿದ್ದ ವರ್ಷ ಮೊಳೆಯರ್ ರವರು ಉತ್ತಮ ಶ್ರೇಣಿಯಲ್ಲಿ 2024ನೇ ಸಾಲಿನ CTET ನಲ್ಲಿ ಉತ್ತೀರ್ಣರಾಗುವ ಮೂಲಕ ಕೇಂದ್ರೀಯ ವಿದ್ಯಾಲಯಗಳ

ಸುಳ್ಯ: ಅರ್ಹತಾ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ ಪಾರಮ್ಯ| ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ(CTET)ಹಾಗೂ ವಿಶ್ವವಿದ್ಯಾನಿಲಯದ ಸಾಮಾನ್ಯ ಪ್ರವೇಶ ಪರೀಕ್ಷೆ(CUET)ಯಲ್ಲಿ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ Read More »

ಪದವಿ ಮಕ್ಕಳಿಗೆ ಮಳೆ ಕಾರಣ ರಜೆ ಯಾಕೆ ನೀಡಲ್ಲ? ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೀಡಿದ್ದಾರೆ ಬೆಸ್ಟ್ ಆನ್ಸರ್!

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಈ ರಜೆಯ ಆದೇಶವನ್ನು ಜಿಲ್ಲಾಧಿಕಾರಿಗಳ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಹೊರಡಿಸಲಾಗುತ್ತದೆ. ಉದಾಹರಣೆಗೆ ಜಿಲ್ಲಾದ್ಯಂತ ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ (ನಿಗದಿತ ದಿನಾಂಕ ನಮೂದಿಸಿ) ಈ ದಿನ ರಜೆ ಇರುತ್ತದೆ ಎಂದು ಆದೇಶ ಪ್ರತಿ ಹೊರಡಿಸಲಾಗುತ್ತದೆ. ಈ ಆದೇಶದಲ್ಲಿ ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡಿರುವುದಿಲ್ಲ ಎನ್ನುವುದು ಸದ್ಯದ ಆರೋಪವಾಗಿದೆ ಜೊತೆಗೆ ವಿದ್ಯಾರ್ಥಿಗಳ ಪ್ರಶ್ನೆ

ಪದವಿ ಮಕ್ಕಳಿಗೆ ಮಳೆ ಕಾರಣ ರಜೆ ಯಾಕೆ ನೀಡಲ್ಲ? ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೀಡಿದ್ದಾರೆ ಬೆಸ್ಟ್ ಆನ್ಸರ್! Read More »

ಶಿರಾಡಿ‌‌ ಘಾಟ್ ಗೆ ಭೇಟಿ ನೀಡಿದ ಸಿಎಂಗೆ ಬಿಗ್ ಶಾಕ್!! ಕಾರಣ ಏನು ಗೊತ್ತೇ?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಜನತೆ ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು, ಶಿರೂರು ಈಗ ಶಿರಾಡಿ ಘಾಟ್ ಕೂಡ ಗುಡ್ಡ ಕುಸಿತದಿಂದ ಹೊರತಾಗಿಲ್ಲ. ಇಂದು ಸಿಎಂ ಸಿದ್ದರಾಮಯ್ಯ ಅವರು ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುಡ್ಡ ಕುಸಿತದ ಭೀಕರತೆಯನ್ನು ಕಂಡು ಶಾಕ್ ಆದ ಸಿದ್ದರಾಮಯ್ಯ ಅವರು, ರಾಷ್ಟ್ರೀಯ ಹೆದ್ದಾರಿ‌ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಜೊತೆಗೆ ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90

ಶಿರಾಡಿ‌‌ ಘಾಟ್ ಗೆ ಭೇಟಿ ನೀಡಿದ ಸಿಎಂಗೆ ಬಿಗ್ ಶಾಕ್!! ಕಾರಣ ಏನು ಗೊತ್ತೇ? Read More »

ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ 35 ವರ್ಷದ ವ್ಯಕ್ತಿ ಆತ್ಮಹತ್ಯೆ  ಮಾಡಿಕೊಂಡಿರುವಂತಹ ಘಟನೆ ಇಂದು ಸಂಜೆ ಸುಮಾರಿಗೆ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರ ಗುರುತು ಪತ್ತೆ ಆಗಿಲ್ಲ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿ ಟ್ರ್ಯಾಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೆಟ್ರೋ ರೈಲಿನಡಿಯಲ್ಲೇ ವ್ಯಕ್ತಿಯ ಮೃತದೇಹ ಇದೆ. ಘಟನೆ ನಂತರ ಕೆಲಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ವಯನಾಡಿನಲ್ಲಿ ಗುಡ್ಡ ಕುಸಿತ: ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸಮಗ್ರ ನ್ಯೂಸ್: ಗುಡ್ಡ ಕುಸಿತಕ್ಕೆ ಕೇರಳದ ವಯನಾಡು ತತ್ತರಿಸಿಹೋಗಿದ್ದು. ಇದೀಗ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡ ಕೈಜೋಡಿಸಿದೆ. ಸಂತ್ರಸ್ತರಿಗೆ 100 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಶನಿವಾರ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಅವರು ಸಂದೇಶ ಪ್ರಕಟಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಸಂಬಂಧಿಸಿ ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ಇರಲಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನಮ್ಮ ಬೆಂಬಲದ

ವಯನಾಡಿನಲ್ಲಿ ಗುಡ್ಡ ಕುಸಿತ: ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Read More »