August 2024

ಪುತ್ತೂರು: ರಾ.ಹೆದ್ದಾರಿ 275ರ ತೆಂಕಿಲದಲ್ಲಿ ಗುಡ್ಡ ಕುಸಿತ| ರಸ್ತೆ ಬಂದ್; ವಾಹನ‌‌ ಸಂಚಾರಕ್ಕೆ ಬದಲಿ ವ್ಯವಸ್ಥೆ

ಸಮಗ್ರ ನ್ಯೂಸ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಪುತ್ತೂರು ಪೇಟೆ ಮೂಲಕ ವಾಹನ ಸಂಚರಿಸಲು ಅವಕಾಶ ನೀಡಲಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಕಳೆದ ಕೆಲ ದಿನಗಳಿಂದ ಆಗಾಗ ಗುಡ್ಡ ಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮಣ್ಣು‌ತೆರವು ಕಾರ್ಯಾಚರಣೆ ಸಾಗುತ್ತಿದೆ. ಗುಡ್ಡ ಮತ್ತಷ್ಟು ಕುಸಿಯುವ […]

ಪುತ್ತೂರು: ರಾ.ಹೆದ್ದಾರಿ 275ರ ತೆಂಕಿಲದಲ್ಲಿ ಗುಡ್ಡ ಕುಸಿತ| ರಸ್ತೆ ಬಂದ್; ವಾಹನ‌‌ ಸಂಚಾರಕ್ಕೆ ಬದಲಿ ವ್ಯವಸ್ಥೆ Read More »

ಬೆಳ್ತಂಗಡಿ: ರೇಖ್ಯ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುಡ್ಡ ಕುಸಿತದಿಂದ ಹಾನಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇದೀಗ ಗುಡ್ಡ ಕುಸಿತದ ಪ್ರಕರಣಗಳು ಹೆಚ್ಚಾಗ ತೊಡಗಿದೆ. ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಭಾರೀ ಮಳೆಯಾಗುತ್ತಿರುವ ಕಾರಣ ದೇವಸ್ಥಾನದ ಸುತ್ತಿ ಇರುವ ಗುಡ್ಡ ಏಕಾಏಕಿ ದೇವಸ್ಥಾನದ ಮೇಲೆ ಬಿದ್ದಿದೆ. ದೇವಸ್ಥಾನದ ಗರ್ಭಗುಡಿ ಮತ್ತು‌ ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ನೀರಿನ ಜೊತೆಗೆ ದೇವಸ್ಥಾನದ ಒಳಗಡೆ ಮಣ್ಣು ನುಗ್ಗಿದ್ದು. ಮಳೆ ಜಾಸ್ತಿಯಾದರೆ ಮತ್ತಷ್ಟು ಗುಡ್ಡ

ಬೆಳ್ತಂಗಡಿ: ರೇಖ್ಯ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುಡ್ಡ ಕುಸಿತದಿಂದ ಹಾನಿ Read More »

ಶಿರಾಡಿ ಘಾಟ್ ನಲ್ಲಿ ‌ಮತ್ತೆ ಗುಡ್ಡ‌ ಕುಸಿತ| ತೆರವಾಗಿದ್ದ ರಸ್ತೆ ಸಂಚಾರ ನಿಮಿಷಗಳಲ್ಲೇ ಬಂದ್

ಸಮಗ್ರ ನ್ಯೂಸ್: ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಕೆಲವೇ ನಿಮಿಷಗಳ ಹಿಂದೆ ತೆರವಾಗಿದ್ದ ರಸ್ತೆ ಮತ್ತೆ ಬಂದ್ ಆಗಿದೆ. ಶಿರಾಡಿಘಾಟ್‌ನ ದೊಡ್ಡ ತಪ್ಪಲು ಬಳಿ ಆ.1ರ ಗುರುವಾರ ಮತ್ತೆ ಭೂಕುಸಿತವಾಗಿದ್ದು, ದೊಡ್ಡ ಸದ್ದಿನೊಂದಿಗೆ ಮಣ್ಣು ಕುಸಿದಿದೆ. ಕಳೆದ ಮೂರು ದಿನಗಳಲ್ಲಿ ಪದೇ ಪದೇ ಭೂಮಿ ಕುಸಿಯುತಿದ್ದು, ಶಿರಾಡಿ ಘಾಟ್‌ನಲ್ಲಿ ಆತಂಕ ಹೆಚ್ಚಿದೆ. ಶಿರಾಡಿ ಘಾಟ್‌ ಕಡೆ ಪ್ರಯಾಣಿಸುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಶಿರಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜು.31ರ ಬುಧವಾರ ಸಂಜೆ ವೇಳೆಗೆ ಭೂ ಕುಸಿತವಾಗಿ 2

ಶಿರಾಡಿ ಘಾಟ್ ನಲ್ಲಿ ‌ಮತ್ತೆ ಗುಡ್ಡ‌ ಕುಸಿತ| ತೆರವಾಗಿದ್ದ ರಸ್ತೆ ಸಂಚಾರ ನಿಮಿಷಗಳಲ್ಲೇ ಬಂದ್ Read More »

ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೋ ಅಸಲಿ ಎಂದ ಎಫ್‌ಎಸ್‌ಎಲ್ ವರದಿ

ಸಮಗ್ರ ನ್ಯೂಸ್: ಮಹಿಳೆಯರ ಮೇಲೆ ಅತ್ಯಾಚಾರ ಆರೋಪದ ಮೇಲೆ ಜೈಲಿನಲ್ಲಿ ಇರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು, ಆದ್ರೆ ಅವು ಎಡಿಟ್ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಪ್ರಜ್ವಲ್

ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೋ ಅಸಲಿ ಎಂದ ಎಫ್‌ಎಸ್‌ಎಲ್ ವರದಿ Read More »

ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಭೇಟಿ

ಸಮಗ್ರ ನ್ಯೂಸ್: ಗುಡ್ಡ ಕುಸಿತದಿಂದಾಗಿ ನಿರ್ನಾಮವಾಗಿರುವ ವಯನಾಡಿಗೆ ಇಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಭೇಟಿ ನೀಡಿದ್ದಾರೆ. ಗುಡ್ಡ ಕುಸಿತದಿಂದಾಗಿ ವಯನಾಡಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 300 ಕ್ಕೆ ತಲುಪಿದೆ. ಇನ್ನೂ ನೂರಾರು ಜನ ನಾಪತ್ತೆಯಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಗುಡ್ಡ ಕುಸಿತ ಸಂಭವಿಸಿದ ಸ್ಥಳ ಈಗ ಕೆಸರು ಗೆದ್ದೆಯಂತಾಗಿದೆ. ಮಣ್ಣು ಮತ್ತು ನೀರು ಸೇರಿಕೊಂಡು ನಡೆಯಲೂ ಕಷ್ಟವಾಗುವಂತಹ ಪರಿಸ್ಥಿತಿ ಎದುರಾಗಿದೆ. ಪರಿಹಾರ ಕಾರ್ಯ ಮುಂದುವರಿಸಲು ರಕ್ಷಣಾ ಸಿಬ್ಬಂದಿಗಳು ತಾತ್ಕಾಲಿಕವಾಗಿ

ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಭೇಟಿ Read More »

ರೆಡ್ ಅಲರ್ಟ್ ಹಿನ್ನೆಲೆ| ಉತ್ತರ ಕನ್ನಡ ಜಿಲ್ಲೆಯ ಏಳು ತಾಲೂಕಿನ ಶಾಲೆ- ಕಾಲೇಜುಗಳಿಗೆ ಆ.2ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಧಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ದಿಪ್ಲೋಮಾ

ರೆಡ್ ಅಲರ್ಟ್ ಹಿನ್ನೆಲೆ| ಉತ್ತರ ಕನ್ನಡ ಜಿಲ್ಲೆಯ ಏಳು ತಾಲೂಕಿನ ಶಾಲೆ- ಕಾಲೇಜುಗಳಿಗೆ ಆ.2ರಂದು ರಜೆ ಘೋಷಣೆ Read More »

ನಿರಂತರ ಮಳೆ ಹಿನ್ನೆಲೆ| ನಾಳೆ(ಆ.2) ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ‌ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ. 2ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.‌ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆ‌ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ‌ತೊರೆಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹ

ನಿರಂತರ ಮಳೆ ಹಿನ್ನೆಲೆ| ನಾಳೆ(ಆ.2) ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ‌ ಘೋಷಣೆ Read More »

ನಿಲ್ಲದ ಕುಂಭದ್ರೋಣ‌ ಮಳೆ| ದ.ಕ ಜಿಲ್ಲೆಯಲ್ಲಿ ಆ.02ರಂದು ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆ ಮುಂದುವರೆದಿರುವ‌ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. ೨ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಆಗಸ್ಟ್ 2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ನಿಲ್ಲದ ಕುಂಭದ್ರೋಣ‌ ಮಳೆ| ದ.ಕ ಜಿಲ್ಲೆಯಲ್ಲಿ ಆ.02ರಂದು ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ವಯನಾಡಿನಲ್ಲಿ ನಿಜವಾಯಿತೇ ಆ ಮಾನಸಿಕ ಅಸ್ವಸ್ಥನ‌ ಭವಿಷ್ಯ!?| ವರುಷಗಳ ಹಿಂದೆ ಹೇಳಿದ‌ ವಿಡಿಯೋ ವೈರಲ್|

ಸಮಗ್ರ ನ್ಯೂಸ್: ಕೇರಳದ ವಯನಾಡ್‌ನ ದೃಶ್ಯ ನೋಡಿದರೆ ಕಲ್ಲು ಮನಸ್ಸು ಕೂಡ ಕರಗುತ್ತದೆ. ಎಲ್ಲರಿಗೂ ಒಂದು ರೀತಿಯ ಜೀವ ಭಯ ಉಂಟಾಗಿದೆ. ನಾಳೆಯ ಬದುಕು ಊಹಿಸಲು ಯಾರಿಗೂ ಸಾಧ್ಯವಿಲ್ಲ ಎಂಬ ಕಠೋರ ಸತ್ಯವನ್ನು ಕೋಪಿಸಿಕೊಂಡ ಈ ಪ್ರಕೃತಿ ಮನುಷ್ಯನಿಗೆ ಸಾರಿ ಸಾರಿ ಹೇಳುತ್ತಿದೆ. ಈ ದುರ್ಘಟನೆಯಲ್ಲಿ ಸತ್ತವರನ್ನು ನೋಡಿದಾಗ ನೋವಾಗುತ್ತದೆ, ಅದಕ್ಕಿಂತ ಹೆಚ್ಚಿನ ದುಃಖ ಅಲ್ಲಿ ಬದುಕುಳಿದವರನ್ನು ನೋಡಿದಾಗ ಉಂಟಾಗುವುದು. ಹೊಟ್ಟೆ- ಬಟ್ಟೆ ಕಟ್ಟಿ ಕಷ್ಟಪಟ್ಟು ಮಾಡಿದ ಸೂರು, ನೆಲ ಇಂದಿಲ್ಲ, ಕೆಲವರು ತನ್ನವರನ್ನೆಲ್ಲಾ ಕಳೆದುಕೊಂಡಿದ್ದಾರೆ, ಮಕ್ಕಳನ್ನು

ವಯನಾಡಿನಲ್ಲಿ ನಿಜವಾಯಿತೇ ಆ ಮಾನಸಿಕ ಅಸ್ವಸ್ಥನ‌ ಭವಿಷ್ಯ!?| ವರುಷಗಳ ಹಿಂದೆ ಹೇಳಿದ‌ ವಿಡಿಯೋ ವೈರಲ್| Read More »

ಹವಾಮಾನ ವರದಿ| ಆ.6ರವರೆಗೂ ಸುರಿಯಲಿದೆ ಭಾರೀ ಮಳೆ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಆಗಸ್ಟ್ 6ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ, ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಅನಾಹುತಗಳನ್ನು ಸೃಷ್ಟಿಸಿದೆ. ಅದೇ ರೀತಿ ಮಳೆ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ

ಹವಾಮಾನ ವರದಿ| ಆ.6ರವರೆಗೂ ಸುರಿಯಲಿದೆ ಭಾರೀ ಮಳೆ Read More »