ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; FIR ದಾಖಲು

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

. Ad Widget . Ad Widget

47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.

. Ad Widget . . Ad Widget . Ad Widget

ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ ಠಕ್ಕರ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿದವರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Leave a Comment

Your email address will not be published. Required fields are marked *