Ad Widget .

ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.. ಕಾಂಗ್ರೆಸ್ ಸರ್ಕಾರದಿಂದ ಗೃಹ ಲಕ್ಷ್ಮೀಯರಿಗೆ ಬಿಗ್ ಆಫರ್..!

ಸಮಗ್ರ ನ್ಯೂಸ್: ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ರೂಪಾಯಿ ಪ್ರತಿ ಮನೆಯ ಯಜಮಾನಿಗೂ ಬರುತ್ತಿವೆ. ಈ ಯೋಜನೆ ಪ್ರಾರಂಭವಾಗಿ ಇದೀಗ ಒಂದು ವರ್ಷ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಿಮಗೆ ಮತ್ತೊಂದು ಭರ್ಜರಿ ಆಫರ್ ಕೊಡುತ್ತಿದೆ. ಇದನ್ನು ಖುದ್ದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಹೇಳಿದ್ದಾರೆ.

Ad Widget . Ad Widget .

ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲಾ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ. ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ.

Ad Widget . Ad Widget .

ಸಾಮಾಜಿಕ ಜಾಲತಾಣ ಯೂಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್‌ಗಳಲ್ಲಿ ಶೇರ್ ಮಾಡಿ ಯಾವ ಯಜಮಾನಿಯರು ಮಾಡಿದ ರೀಲ್ಸ್‌ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ. ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್‌ಗಳಲ್ಲಿ ಹಂಚಿಕೊಳ್ಳಬೇಕಿದೆ. ಅತಿ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಮಾಡಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ.

ಹೆಚ್ಚು ವೀವ್ಸ್ ಪಡೆದ ಮೊದಲ 50 ಯಜಮಾನಿಯರಿಗೆ ವೈಯಕ್ತಿಕವಾಗಿ ಬಹುಮಾನ ಕೊಡುವುದಾಗಿ ಸಚಿವರು ಹೇಳಿದ್ದಾರೆ. ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *