ಸಮಗ್ರ ನ್ಯೂಸ್: ಬೈಕ್ ಸ್ಕಿಡ್ ಆಗಿ ಇಬ್ಬರು ಯುವಜರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ಸೆ.5ರ ತಡರಾತ್ರಿ ನಡೆದಿದೆ.
ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಅನಾಹುತ ನಡೆದಿದೆ. ಕೋಡಿಕಲ್ ನಿವಾಸಿ ಕಾಶೀನಾಥ್(17) ಮತ್ತು ಉಪ್ಪಿನಂಗಡಿಯ ಚೇತನ್(24) ಮೃತ ದುರ್ದೈವಿ.
ಇವರಿಬ್ಬರಿದ್ದ ಬೈಕ್ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.




























