Ad Widget .

ಮಂಗಳೂರು ಹೊರವಲಯದ ತಲಪಾಡಿ ಬಳಿ ನವವಿವಾಹಿತ ದಂಪತಿಗಳಿದ್ದ ಕಾರು ಅಪಘಾತ| ಪತ್ನಿ ಸಾವು; ಪತಿ ಗಂಭೀರ

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಬಳಿ ನಡೆದಿದೆ.

Ad Widget . Ad Widget .

ಪೆರ್ನೆ ಸಮೀಪದ ಒಡ್ಯ ನಿವಾಸಿ ಅನಿಶ್ ಕೃಷ್ಣ ತಮ್ಮ ಪತ್ನಿ ಮಾನಸ ಜೊತೆ ಬಿ.ಸಿ.ರೋಡ್ ನಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

Ad Widget . Ad Widget .

ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿ ಹಾರಿ ಕೆಎಸ್‌ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಮಾನಸ ಸ್ಥಳದಲ್ಲಿಯೇ ಅಸುನೀಗಿದ್ದು, ಗಂಭೀರ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ 5ರಂದು ಇವರಿಬ್ಬರ ವಿವಾಹ ದೇಂತಡ್ಕ ದೇವಸ್ಥಾನದಲ್ಲಿ ನೆರವೇರಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಾಸ್​ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *