ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

ಸಮಗ್ರ ನ್ಯೂಸ್: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್ವೀರ್ ಸಿಂಗ್ ಪೋಷಕರಾಗಿದ್ದಾರೆ. ದೀಪಿಕಾ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆಯಷ್ಟೇ ದೀಪಿಕಾ ಪಡುಕೋಣೆ ಮುಂಬೈನ ಅಂಬಾನಿ ಮಾಲೀಕತ್ವದ ಹೆಚ್‌ಎನ್‌ ರಿಲಯನ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 28ರಂದು ದೀಪಿಕಾಗೆ ಡೆಲಿವರಿ ಡೇಟ್ ಇತ್ತು.

. Ad Widget . Ad Widget

ಆದರೆ ನಿಗದಿಗಿಂತ 20 ದಿನ ಮೊದಲೇ ದೀಪಿಕಾ ರಣ್ವೀರ್ ಮನೆಗೆ ಗೌರಿಯ ಆಗಮನವಾಗಿದೆ. ಒಂದು ದಿನದ ಹಿಂದಷ್ಟೇ ದೀಪಿಕಾ ಪಡುಕೋಣೆ ತಮ್ಮ ಪತಿ ರಣ್ವೀರ್ ಸಿಂಗ್ ಹಾಗೂ ಕುಟುಂಬದವರ ಜೊತೆಗೆ ಬರಿಗಾಲಿನಲ್ಲಿ ಮುಂಬೈನ ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.

. Ad Widget . . Ad Widget . Ad Widget

Leave a Comment

Your email address will not be published. Required fields are marked *