ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ದೊರೆತಿದೆ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪ್ರತಿ ವರ್ಷವೂ ಚೌತಿ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗುತ್ತಿತ್ತು ಆದರೆ ಈ ಬಾರಿ ಚೌತಿ ಕಳೆದರೂ ಮಳೆ ಹೆಚ್ಚಾಗುವ ಸೂಚನೆ ಇದೆ.
ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ,ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಸೇಡಂ,ಗೇರುಸೊಪ್ಪ, ಮಾಣಿ, ಕದ್ರಾ, ಕಾರವಾರ, ಸೈದಾಪುರ, ಖಜೂರಿ, ಶಿರಾಲಿ, ಸಿದ್ದಾಪುರ, ಧರ್ಮಸ್ಥಳ, ಮಂಕಿ, ಗಬ್ಬೂರು, ಕಲಬುರಗಿ, ಚಿತ್ತಾಪುರ, ಔರಾದ್, ಬನವಾಸಿ, ಪುತ್ತೂರು, ಜೋಯಿಡಾ, ಕುಮಟಾ, ಮಂಠಾಳ, ಕುಂದಾಪುರದಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.







