Ad Widget .

ವಾಯು ಮಾಲಿನ್ಯ ಹೆಚ್ಚಳದ ಸಾಧ್ಯತೆ/ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ

ಸಮಗ್ರ ನ್ಯೂಸ್‌: ಮುಂಬರುವ ಚಳಿಗಾಲದಲ್ಲಿ ದೆಹಲಿಯಲ್ಲಿ ವಾಯು ಮಾಲಿನ್ಯ ಮತ್ತೆ ಹೆಚ್ಚಾಗಲಿರುವ ಸಾಧ್ಯತೆ ಇರುವುದರಿಂದ, ಅದನ್ನು ನಿಯಂತ್ರಿಸಲು ದೆಹಲಿ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. ಆನ್‌ಲೈನ್‌ನಲ್ಲೂ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ಸಹ ನಿಷೇಧಿಸಲಾಗಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುವುದು. ಪಟಾಕಿ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲಿನ ನಿಷೇಧವು ಜನವರಿ 1, 2025 ರವರೆಗೆ ಜಾರಿಯಲ್ಲಿರುತ್ತದೆ ಎಂದು ಗೋಪಾಲ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *